ಇಸ್ರೇಲ್ : ಆರೋಗ್ಯ ಸಚಿವರಿಗೂ ಸೋಂಕು
Team Udayavani, Apr 3, 2020, 2:00 PM IST
ಜೆರುಸಲೇಂ(ಇಸ್ರೇಲ್) : ಇಸ್ರೇಲ್ ಆರೋಗ್ಯ ಮಂತ್ರಿ ಯಾಕೋವ್ ಲಿಟ್ಜ…ಮನ್ ಹಾಗೂ ಅವರ ಪತ್ನಿಗೆ ಕೋವಿಡ್ 19 ಸೋಂಕಿರುವುದು ದೃಢಪಟ್ಟಿದೆ. ಇದರಿಂದಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಅವರನ್ನು ಪ್ರತ್ಯೇಕಗೊಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ತೀವ್ರ ಆತಂಕ
ಸೋಂಕಿತ ಆರೋಗ್ಯ ಮಂತ್ರಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತಿದ್ದ ಕಾರಣ ತೀವ್ರ ಆತಂಕ ಸೃಷ್ಟಿಯಾಗಿದೆ. ಆರೋಗ್ಯ ಮಂತ್ರಿಯೊಂದಿಗೆ ಹಿಂದಿನ ಎರಡು ವಾರಗಳಿಂದ ಸಂಪರ್ಕದಲ್ಲಿದ್ದ ಎಲ್ಲರನ್ನೂ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ.
ವೇಗವಾಗಿ ಹರಡುತ್ತಿದೆ
ಈ ಹಿಂದೆ ಸರಕಾರದ ಆದೇಶಗಳನ್ನು ಯಹೂದಿಗಳ ಗುರುಗಳು ನಿರ್ಲಕ್ಷಿಸಿದ್ದರು ಎಂಬ ಕಾರಣಕ್ಕೆ ಈಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ 19 ಸೋಂಕು ಇಸ್ರೇಲ್ನಲ್ಲಿ ತುಂಬಾ ವೇಗವಾಗಿ ಹರಡುತ್ತಿದೆ. ಆರು ಸಾವಿರ ಮಂದಿ ಕೋವಿಡ್ 19 ಪಾಸಿಟಿವ್ ಎಂದು ದೃಢಪಟ್ಟಿದೆ. 26 ಮಂದಿ ಈವರೆಗೂ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!