ಕಮಲಾ- ಬೈಡೆನ್‌ಗೆ ಟೈಮ್‌ ವರ್ಷದ ವ್ಯಕ್ತಿಗಳು ಗೌರವ


Team Udayavani, Dec 12, 2020, 12:44 AM IST

Time

ನ್ಯೂಯಾರ್ಕ್‌: ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್‌ ಮತ್ತು ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಪ್ರತಿಷ್ಠಿತ ಟೈಮ್‌ ಮ್ಯಾಗಜಿನ್‌ನ “2020ರ ವರ್ಷದ ವ್ಯಕ್ತಿಗಳು’ ಗೌರವಕ್ಕೆ ಪಾತ್ರರಾಗಿದ್ದಾರೆ. “ವಿಭಜನೆಯ ಆವೇಶಕ್ಕಿಂತಲೂ ಸಹಾನುಭೂತಿಯ ಶಕ್ತಿಯೇ ದೊಡ್ಡದು ಎಂದು ತೋರಿಸುವ ಮೂಲಕ, ನೋವಲ್ಲಿರುವ ಜಗತ್ತಿಗೆ ಉಪಶಮನದ ಹಿತಾನುಭವ ನೀಡುವ ಮೂಲಕ ಅಮೆರಿಕದ ಕಥೆಯನ್ನೇ ಬದಲಿಸಿದವರು ಇವರು’ ಎಂದು ಟೈಮ್‌ ನಿಯತಕಾಲಿಕೆ ಬಣ್ಣಿಸಿದೆ.

ಅಮೆರಿಕದ ರಾಷ್ಟ್ರೀಯ ಸೋಂಕು ರೋಗ ಗಳ ಸಂಸ್ಥೆಯ ನಿರ್ದೇಶಕ ಡಾ| ಆ್ಯಂಥೊನಿ ಫಾಸಿ, ಮುಂಚೂಣಿ ಆರೋಗ್ಯ ಕಾರ್ಯ ಕರ್ತರು ಹಾಗೂ ಜನಾಂಗೀಯ ನ್ಯಾಯ ಹೋರಾಟದ ಆಯೋಜಕರನ್ನು ಟೈಮ್‌ “ವರ್ಷದ ಪೋಷಕರು’ ಎಂದು ಕರೆದಿದೆ. ದ.ಕೊರಿಯಾದ ಬಾಲಕರ ಬ್ಯಾಂಡ್‌ ಬಿಟಿಎಸ್‌ “ವರ್ಷದ ಮನೊರಂಜಕ’ ಹಾಗೂ ಬಾಸ್ಕೆಟ್‌ಬಾಲ್‌ ಆಟಗಾರ ಲೆಬ್ರಾನ್‌ ಜೇಮ್ಸ್‌ “ವರ್ಷದ ಅಥ್ಲೀಟ್‌’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತೀಯ ರಾಹುಲ್‌ ವರ್ಷದ ಹೀರೋ
ಕಪ್ಪುವರ್ಣೀಯ ಜಾರ್ಜ್‌ ಫ್ಲಾಯ್ಡ ಹತ್ಯೆಯ ಬಳಿಕ ಅಮೆರಿಕದಲ್ಲಿ ಆರಂಭವಾದ ಜನಾಂಗೀಯ ದೌರ್ಜನ್ಯದ ವಿರುದ್ಧದ ಹೋರಾಟದ ವೇಳೆ ಸುಮಾರು 70 ಮಂದಿ ಪ್ರತಿಭಟನಕಾರರಿಗೆ ತಮ್ಮ ಮನೆಯಲ್ಲೇ ಆಶ್ರಯ ನೀಡಿದ್ದ ಭಾರತೀಯ -ಅಮೆರಿಕನ್‌ ರಾಹುಲ್‌ ದುಬೆ “ವರ್ಷದ ಹೀರೋ’ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ವರ್ಷ ತಮ್ಮ ಕರ್ತವ್ಯಕ್ಕೂ ಮಿಗಿಲಾಗಿ ಉತ್ತಮ ಕೆಲಸಗೈದ ವ್ಯಕ್ತಿಗಳ ಪೈಕಿ ದುಬೆ ಅವರೂ ಒಬ್ಬರು ಎಂದು ಟೈಮ್‌ ಮ್ಯಾಗಜಿನ್‌ ಹೇಳಿದೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.