ಅಮೆರಿಕದ ವಿದೇಶಾಂಗ ಸಚಿವಾಲಯ: ಭಾರತ ಮೂಲದ ರಿಚರ್ಡ್ ವರ್ಮಾ ನೇಮಕ
Team Udayavani, Dec 24, 2022, 8:05 PM IST
ವಾಷಿಂಗ್ಟನ್: ಅಮೆರಿಕದ ವಿದೇಶಾಂಗ ಸಚಿವಾಲಯದಲ್ಲಿ ಉನ್ನತ ಸ್ಥಾನಕ್ಕೆ ಭಾರತ ಮೂಲದ ನ್ಯಾಯವಾದಿ, ರಾಜತಾಂತ್ರಿಕ ಅಧಿಕಾರಿ ರಿಚರ್ಡ್ ವರ್ಮಾ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನೇಮಿಸಿದ್ದಾರೆ.
ವಿದೇಶಾಂಗ ಸಚಿವಾಲಯದ ನಿರ್ವಹಣೆ ಮತ್ತು ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಯಾಗಿ ರಿಚರ್ಡ್ ವರ್ಮಾ(54)ರನ್ನು ನೇಮಿಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ.
ಪ್ರಸ್ತುತ ವರ್ಮಾ ಅವರು ಮಾಸ್ಟರ್ಕಾರ್ಡ್ ಕಂಪನಿಯ ಜಾಗತಿಕ ಸಾರ್ವಜನಿಕ ನೀತಿಯ ಮುಖ್ಯಸ್ಥ ಮತ್ತು ಮುಖ್ಯ ಕಾನೂನು ಅಧಿಕಾರಿಯಾಗಿದ್ದಾರೆ.
2015ರಿಂದ 2017ರವರೆಗೆ ಅವರು ಭಾರತಕ್ಕೆ ಅಮೆರಿಕ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಒಬಾಮ ಅವರ ಆಡಳಿತದಲ್ಲಿ ಸಂಸದೀಯ ವ್ಯವಹಾರಗಳ ಸಹಾಯಕ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Microsoft ಚಿಂತನೆ : ಚೀನದಿಂದ 800 ನೌಕರರ ವರ್ಗ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್
Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು
Slovak PM: ದುಷ್ಕರ್ಮಿಯಿಂದ ಸ್ಲೊವಾಕ್ ಪ್ರಧಾನಿ ರಾಬರ್ಟ್ ಮೇಲೆ ಗುಂಡಿನ ದಾಳಿ…
London: ಭಾರತೀಯ ಮೂಲದ ಮಹಿಳೆಗೆ ಬಸ್ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ