ಮೋದಿ ನನ್ನ ನಿಜವಾದ ಗೆಳೆಯ : ಭೇಟಿಗೂ ಮುನ್ನ ಟ್ರಂಪ್ ಬಣ್ಣನೆ
Team Udayavani, Jun 25, 2017, 10:39 AM IST
ವಾಷಿಂಗ್ಟನ್ : ನನ್ನ ನಿಜವಾದ ಮಿತ್ರನೊಂದಿಗೆ ಪ್ರಮುಖ ವಿಚಾರಗಳನ್ನು ಚರ್ಚೆ ಮಾಡುವುದಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಿದ್ದಾರೆ.
2 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಮೋದಿ ಅವರಿಗೆ ವಾಷಿಂಗ್ಟನ್ನಲ್ಲಿ ಕೆಂಪು ಹಾಸಿನ ಸ್ವಾಗತ ನೀಡಲಾಯಿತು.
ಇಂದು ಭಾರತೀಯ ಮೂಲದವರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ , ನಾಳೆ ಟ್ರಂಪ್ ಅವರೊಂದಿಗೆ ಹಲವು ವಿಚಾರಗಳ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ. ಬಳಿಕ ಟ್ರಂಪ್ ಅವರೊಂದಿಗೆ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ.
ಟ್ರಂಪ್ ಅಧ್ಯಕ್ಷರಾದ ಬಳಿಕ ಮೋದಿ ಅವರ ಅಮೆರಿಕ ಪ್ರವಾಸ ಹಲವು ಕುತೂಹಲಗಳನ್ನು ಮೂಡಿಸಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.
ಎಚ್1 ಬಿ ವೀಸಾ ಬದಲಾವಣೆ ನಿಯಮಗಳು, ಉಗ್ರವಾದಕ್ಕೆ ಕಡಿವಾಣ ಹಾಕುವುದು ,ನಾಗರಿಕ ಪರಮಾಣು ಒಪ್ಪಂದ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು