ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
Team Udayavani, Oct 1, 2022, 10:25 PM IST
ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದೆ.
ಇಸ್ಲಾಮಾಬಾದ್ನ ಮ್ಯಾಜಿಸ್ಟ್ರೇಟ್ ಅವರು ತಹ್ರಿಕ್-ಎ-ಇನ್ಸಾಫ್ ನಾಯಕ ಇಮ್ರಾನ್ ಖಾನ್ಗೆ ಸೆಪ್ಟೆಂಬರ್ 30 ರಂದು ಬಂಧನ ವಾರಂಟ್ ಹೊರಡಿಸಿದ್ದು, ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ವಾರಂಟ್ ಹೊರಡಿಸಿದ್ದಾರೆ. ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇಸ್ಲಾಮಾಬಾದ್ನಲ್ಲಿ 20ನೇ ಆಗಸ್ಟ್ 2022 ರಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ ಆರೋಪ ಇಮ್ರಾನ್ ಖಾನ್ ಮೇಲಿದೆ. ಅವರ ಹೇಳಿಕೆಗಳ ನಂತರ, ಆಗಸ್ಟ್ 20 ರಂದು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು