ಮಸೂದ್ ಅಜರ್ ಒಬ್ಬ ಕೆಟ್ಟ ಮನುಷ್ಯ: ಚೀನಕ್ಕೆ ಅಮೆರಿಕ
Team Udayavani, Nov 8, 2017, 12:37 PM IST
ವಾಷಿಂಗ್ಟನ್ : ಪಾಕಿಸ್ಥಾನದಲ್ಲಿ ನೆಲೆಗೊಂಡಿರುವ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಒಬ್ಬ ಕೆಟ್ಟ ಮನುಷ್ಯ; ಆತನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಎಂದು ಅಮೆರಿಕ ಚೀನಕ್ಕೆ ಹೇಳಿದೆ.
ಮುಂಬಯಿ ದಾಳಿ ಹಾಗೂ ಪಠಾಣ್ ಕೋರ್ಟ್ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಮಸೂದ್ ಅಜರ್ ನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನ ವಿಶ್ವಸಂಸ್ಥೆಯಲ್ಲಿ ನಾಲ್ಕನೇ ಬಾರಿಗೆ ಅಡ್ಡಗಾಲು ಹಾಕಿರುವುದಕ್ಕೆ ಪ್ರತಿಕ್ರಿಯೆ ಎಂಬಂತೆ ಅಮೆರಿಕ ಈ ನಿಷ್ಠುರ ಮಾತುಗಳನ್ನು ಆಡಿದೆ.
ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಬೆಂಬಲಿತ ಪ್ರಸ್ತಾವಕ್ಕೆ ಚೀನ ವಿಶ್ವಸಂಸ್ಥೆಯಲ್ಲಿ ಕಳೆದ ವಾರ ನಾಲ್ಕನೇ ಬಾರಿಗೆ ಅಡ್ಡಗಾಲು ಹಾಕಿದಾಗ ಅಲ್ ಕಾಯಿದಾ ನಿಷೇಧ ಮಂಡಳಿ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಒಮ್ಮತದ ಕೊರತೆ ಇದೆ ಎಂಬ ಕಾರಣ ನೀಡಿತ್ತು.
ಉಗ್ರ ಮಸೂದ್ ಅಜರ್ ಸ್ಥಾಪಿಸಿರುವ ಜೈಶ್ ಎ ಮೊಹಮ್ಮದ್ ಸಂಘಟನೆಯನ್ನು ವಿಶ್ವಸಂಸ್ಥೆಯ ನಿಷೇಧಿತ ಉಗ್ರ ಪಟ್ಟಿಯಲ್ಲಿ ಈಗಾಗಲೇ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ