ಮೋದಿ ಒಬ್ಬ ಶ್ರೇಷ್ಠ ನಾಯಕ; ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉದ್ಘೋಷ
Team Udayavani, Sep 6, 2020, 6:25 AM IST
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ನವೆಂಬರ್ 3ರಂದು ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ- ಅಮೆರಿಕನ್ನರು ನನ್ನ ಪರವೇ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಟ್ರಂಪ್, ಭಾರತೀಯ-ಅಮೆರಿಕನ್ ಸಮುದಾ ಯ ದೊಂದಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯ ವರೊಂದಿಗೆ ತಾವು ಹೊಂದಿರುವ ಬಾಂಧವ್ಯವನ್ನು ವಿವರಿಸುತ್ತಾ, ನನಗೆ ಭಾರತ ಮತ್ತು ಮೋದಿಯವರ ಬೆಂಬ ಲವಿದೆ. ಹಾಗಾಗಿ, ಭಾರತೀ ಯರು ನನ್ನ ಪರವೇ ಮತ ಚಲಾಯಿ ಸುವುದು ಖಚಿತ ಎಂದಿದ್ದಾರೆ.
ಮೋದಿಯವರು ನನ್ನ ಆತ್ಮೀಯ ಗೆಳೆಯ. ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರೊಬ್ಬ ಶ್ರೇಷ್ಠ ನಾಯಕ ಎಂದೂ ಹೇಳಿದ ಟ್ರಂಪ್, ತಮ್ಮ ಕುಟುಂಬದ ಭಾರತ ಪ್ರವಾಸದ ದಿನಗಳನ್ನು ಹಾಗೂ ಪ್ರಧಾನಿ ಮೋದಿಯವರ ಹೂಸ್ಟನ್ ಕಾರ್ಯಕ್ರಮವನ್ನು ಸ್ಮರಿಸಿದ್ದಾರೆ.
ಅಮೆರಿಕದ ಚುನಾವಣೆಯಲ್ಲಿ ಡೆಮಾಕ್ರಾಟ್ ಹಾಗೂ ರಿಪಬ್ಲಿಕನ್ ಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ಭಾರತೀಯ- ಅಮೆರಿಕನ್ ಸಮುದಾಯವನ್ನು ಓಲೈಸುತ್ತಿವೆ. ಇತ್ತೀಚೆಗಷ್ಟೇ ಮ್ಯಾಸನ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯು, ಸಾಂಪ್ರದಾಯಿಕವಾಗಿ ಡೆಮಾ ಕ್ರಾಟ್ ಪಕ್ಷದ ಪರ ಮತ ಚಲಾಯಿಸುತ್ತಿದ್ದ ಭಾರತೀಯ - ಅಮೆರಿಕನ್ ಸಮುದಾಯವು, ಟ್ರಂಪ್- ಮೋದಿ ಆತ್ಮೀಯತೆಯ ಕಾರಣಕ್ಕಾಗಿ ರಿಪಬ್ಲಿಕನ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಆದರೆ, ಡೆಮಾಕ್ರಾಟ್ನ ಉಪಾ ಧ್ಯಕ್ಷ ಹುದ್ದೆಯ ಸ್ಪರ್ಧಿಯಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಹೆಸರು ಘೋಷಣೆಯಾಗುವ ಮೊದಲೇ ಈ ಸಮೀಕ್ಷೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್