ಚುನಾವಣೆವರೆಗೆ ಷರೀಫ್, ಪುತ್ರಿ ಜೈಲಲ್ಲೇ
Team Udayavani, Jul 18, 2018, 9:00 AM IST
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಪುತ್ರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪಾಕಿಸ್ತಾನದ ನ್ಯಾಯಾಲಯವು ಜುಲೈ ಕೊನೆಯ ವಾರಕ್ಕೆ ಮುಂದೂಡಿದೆ. ಹೀಗಾಗಿ, ಚುನಾವಣೆ ಮುಗಿಯುವವರೆಗೂ ಷರೀಫ್, ಪುತ್ರಿ ಜೈಲಲ್ಲೇ ಇರಬೇಕಾದ ಸ್ಥಿತಿ ಎದುರಾಗಿದೆ.