ಬ್ರಿಟನ್ ನಲ್ಲಿ ದಕ್ಷಿಣ ಆಫ್ರಿಕಾ ಮೂಲದ ಮತ್ತೊಂದು ಹೊಸ ಸ್ವರೂಪದ ಸೋಂಕು ಪತ್ತೆ
ನಾವು ಬ್ರಿಟನ್ ನಲ್ಲಿ ಹೊಸ ಸೋಂಕನ್ನು ಪತ್ತೆ ಹಚ್ಚಿರುವುದಾಗಿ ಹ್ಯಾನ್ ಕುಕ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Team Udayavani, Dec 24, 2020, 11:13 AM IST
ಲಂಡನ್: ಕೋವಿಡ್ 19 ವೈರಸ್ ನ ಮತ್ತೊಂದು ಗಂಭೀರ ಸ್ವರೂಪದ ದಕ್ಷಿಣ ಆಫ್ರಿಕಾ ಮೂಲದ ಹೊಸ ಸೋಂಕು ಬ್ರಿಟನ್ ನಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ದಕ್ಷಿಣ ಆಫ್ರಿಕಾದ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ ವಾರ ದೇಶದಲ್ಲಿ ಹೊಸ ಸ್ವರೂಪದ ಸೋಂಕು ಪತ್ತೆಯಾಗಿದ್ದು, ಇದು ಇತ್ತೀಚೆಗೆ ಕ್ಷಿಪ್ರವಾಗಿ ಹರಡಲು ಕಾರಣವಾಗಿದೆ ಎಂದು ಹೇಳಿದೆ.
ನಾವು ಬ್ರಿಟನ್ ನಲ್ಲಿ ಹೊಸ ಸೋಂಕನ್ನು ಪತ್ತೆ ಹಚ್ಚಿರುವುದಾಗಿ ಹ್ಯಾನ್ ಕುಕ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕೆಲವು ವಾರಗಳ ಹಿಂದೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದ್ದ ವ್ಯಕ್ತಿಗಳ ಸಂಪರ್ಕದಲ್ಲಿದ್ದ ಲಂಡನ್ ನ ಇಬ್ಬರಲ್ಲಿ ಈ ಹೊಸ ಸೋಂಕು ಪತ್ತೆಯಾಗಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಲಂಡನ್ ನಿಂದ ಬಂದ ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ
ರೂಪಾಂತರ ತಳಿಯ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಬ್ರಿಟನ್ ಈಗಾಗಲೇ ಪ್ರಯತ್ನಿಸುತ್ತಿದ್ದು, ಹೊಸ ಸೋಂಕಿನ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಲಾಗುತ್ತಿದೆ ಎಂದು ಬ್ರಿಟನ್ ಈ ಸಂದರ್ಭದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ