Udayavni Special

ಪಾಕ್‌ ನೆಲ ಬಳಸಿ ಉಗ್ರ ಕೃತ್ಯ ನಡೆಸುವುದಕ್ಕೆ ಬಿಡೆ: ಪ್ರಧಾನಿ ಇಮ್ರಾನ್

Team Udayavani, Mar 9, 2019, 11:52 AM IST

imran-khan3-700.jpg

ಇಸ್ಲಾಮಾಬಾದ್‌ : ”ಪಾಕ್‌ ನೆಲವನ್ನು ಬಳಸಿಕೊಂಡ ಯಾವುದೇ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳಿಗೆ ತನ್ನ ಸರಕಾರ ಬಿಡುವುದಿಲ್ಲ” ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿರುವುದಾಗಿ ವರದಿ ತಿಳಿಸಿದೆ. 

ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಸಿಂಧ್‌ ಪ್ರಾಂತ್ಯದ ಥಾರ್‌ ಜಿಲ್ಲೆಯಲ್ಲಿ ಸಾರ್ವಜನಿಕ ಭಾಷಣ ಮಾಡಿದ ಇಮ್ರಾನ್‌ ಖಾನ್‌, ಪಾಕಿಸ್ಥಾನದ ಆದ್ಯಂತವಿರುವ ಧಾರ್ಮಿಕ ಅಲ್ಪಸಂಖ್ಯಾಕರ ರಕ್ಷಣೆಗೆ ತನ್ನ ಸರಕಾರ ಪೂರ್ಣವಾಗಿ ಬದ್ಧವಿದೆ ಎಂದು ಹೇಳಿದರು. ಡಾನ್‌ ಸುದ್ದಿ ಪತ್ರಿಕೆ ಇಮ್ರಾನ್‌ ಭಾಷಣವನ್ನು ವರದಿ ಮಾಡಿದೆ.

ಪಾಕಿಸ್ಥಾನದ ಸ್ಥಾಪಕ ಮೊಹಮ್ಮದ್‌ ಅಲಿ ಜಿನ್ನಾ ಅವರ ಬೋಧನೆಗಳ ಪ್ರಕಾರ ನನ್ನ ಸರಕಾರ ನಡೆಯುತ್ತಿದೆ ಎಂದು ಪ್ರಧಾನಿ ಇಮ್ರಾನ್‌ ಹೇಳಿದರು. 

ಜಿನ್ನಾ ಅವರು ಪಾಕಿಸ್ಥಾನ ಸ್ಥಾಪನೆಯಾದಾಗ ದೇಶದಲ್ಲಿನ ಎಲ್ಲ ಜನಾಂಗೀಯರು ಮತ್ತು ಧರ್ಮೀಯರಿಗೆ ಪೂರ್ತಿ ರಕ್ಷಣೆಯ ಭರವಸೆ ನೀಡಿದ್ದರು. 

ಪಾಕಿಸ್ಥಾನ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರಿಗೆ ಮತ್ತು ಉಗ್ರ ಸಂಘಟನೆಗಳಿಗೆ ನೆರವು, ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಜಾಗತಿಕ ಸಮುದಾಯ ಅದನ್ನು ಏಕಾಂಗಿಯನ್ನಾಗಿ ಮಾಡುವುದು ನಿಶ್ಚಿತ ಎಂಬ ಎಚ್ಚರಿಕೆಯನ್ನು ಅಮೆರಿಕ ನಿನ್ನೆಯಷ್ಟೇ ನೀಡಿತ್ತು. ಆ ಹಿನ್ನೆಲೆಯಲ್ಲಿ ಇಮ್ರಾನ್‌ ಖಾನ್‌ ಈ ಮಾತುಗಳನ್ನು ಆಡಿರುವುದು ನಿಚ್ಚಳವಿದೆ. 

ಎರಡು ದಿನಗಳ ಹಿಂದಷ್ಟೇ ಪಾಕ್‌ ಸರಕಾರ ಮುಂಬಯಿ ಉಗ್ರ ದಾಳಿ ಮಾಸ್ಟರ್‌ ಮೈಂಡ್‌, ಉಗ್ರ ಹಾಫೀಜ್‌ ಸಯೀದ್‌ ನೇತೃತ್ವದ ಜಮಾತ್‌ ಉದ್‌ ದಾವಾ ಸಂಘಟನೆಯ ಲಾಹೋರ್‌ ಪ್ರಧಾನ ಕಾರ್ಯಾಲಯಕ್ಕೆ  ಮತ್ತು ಇದರ ದಾನ-ದತ್ತಿ ವಿಭಾಗವಾಗಿರುವ ಫ‌ಲಾಹ್‌ ಎ ಇನ್ಸಾನಿಯತ್‌ ಫೌಂಡೇಶನ್‌ ಕಾರ್ಯಾಲಯಕ್ಕೆ ಬೀಗ ಜಡಿದಿದೆ, ಮಾತ್ರವಲ್ಲದೆ 120 ಶಂಕಿತ ಉಗ್ರರನ್ನು ಬಂಧಿಸಿದೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. 

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ರೆಸ್ಟೋರೆಂಟ್‌ ಮೇಲೆ ದಾಳಿ ಕೇಸ್‌ ಎಫ್ ಬಿಐಗೆ

ಭಾರತೀಯ ರೆಸ್ಟೋರೆಂಟ್‌ ಮೇಲೆ ದಾಳಿ ಕೇಸ್‌ ಎಫ್ ಬಿಐಗೆ

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.