ಇಲ್ಲ.. ಭಾರತದೊಂದಿಗೆ ಮಾತುಕತೆ ನಡೆಸಲ್ಲ!

ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೊಸ ವರಾತ

Team Udayavani, Aug 22, 2019, 5:44 PM IST

ಇಸ್ಲಾಮಾಬಾದ್‌: ಈ ವರೆಗೆ ಭಾರತ ಮಾತುಕತೆಗೆ ಬರುತ್ತಿಲ್ಲ ಎಂದು ಗೋಳಿಡುತ್ತಿದ್ದ ಪಾಕಿಸ್ಥಾನದ ಪ್ರಧಾನಿ ಇಮ್ರಾನ್‌ ಖಾನ್‌ ಈಗ ಬೇರೆಯದೇ ಆದ ವರಾತ ಶುರುಮಾಡಿದ್ದಾರೆ. ನಾವು ಭಾರತದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಇದರ ಬಗ್ಗೆ ನಮಗೆ ಯಾವುದೇ ಆಸಕ್ತಿಯೂ ಇಲ್ಲ ಎಂದು ಹೇಳಿದ್ದಾರೆ.

ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಖಾನ್‌, ಪದೇ ಪದೇ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತುಕತೆಗೆ ಮನವಿ ಮಾಡಿದ್ದೆ. ಆದರೆ ಅವರು ಅದನ್ನು ತಿರಸ್ಕರಿಸಿದರು. ನಾನು ಶಾಂತಿ ಸ್ಥಾಪನೆಗೆ ಮಾತುಕತೆಗೆ ಮುಂದಾದರೂ ಅದನ್ನು ರದ್ದುಪಡಿಸಲಾಯ್ತು.

ಆದ್ದರಿಂದ ಇನ್ನು ಮಾಡುವುದೇನಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಎರಡೂ ದೇಶಗಳು ಅಣ್ವಸ್ತ್ರ ಸಜ್ಜಿತ ದೇಶಗಳಾಗಿರುವುದರಿಂದ ಮುಂದಿನ ದಿನಗಳ ಬಗ್ಗೆ ಆತಂಕಿತನಾಗಿದ್ದೇನೆ ಎಂದು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ