ಇಸ್ರೇಲ್ ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದ ಅಜಿತ್ ದೋವಲ್
Team Udayavani, Mar 3, 2017, 9:37 AM IST
ಜೆರುಸಲೇಂ: ಇಸ್ರೇಲ್ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಬುಧವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ವರ್ಷದ ಮಧ್ಯದಲ್ಲಿ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದು ಅದಕ್ಕೂ ಮುನ್ನ ನಡೆದ ದೋವಲ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.
ದೋವಲ್ ಅವರನ್ನು ಜೆರುಸಲೇಂನ ಕಚೇರಿಗೆ ಕರೆಸಿಕೊಂಡ ನೆತನ್ಯಾಹು ಅವರು ಕೆಲ ಹೊತ್ತು ಮಹತ್ವದ ವಿಚಾರಗಳ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ಇಸ್ರೇಲ್ನ ಭದ್ರತಾ ಸಲಹೆಗಾರ, ಜಾಕೋಬ್ ನಾಗೇಲ್ ಅವರೊಂದಿಗೂ ಮಾತುಕತೆ ನಡೆಸಿದರು.
ಉಭಯ ದೇಶಗಳು ರಾಜತಾಂತ್ರಿಕ ಸಂಬಂಧದ 25 ನೇ ವರ್ಷಾಚರಣೆಯಲ್ಲಿದ್ದು, ನೆತನ್ಯಾಹು ಅವರು ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ