ಕೋವಿಡ್ ಲಸಿಕೆ : ನಾಲ್ವರಲ್ಲಿ ಒಬ್ಬರಿಗೆ ಮಾತ್ರ ಅಡ್ಡಪರಿಣಾಮ : ಅಧ್ಯಯನ ವರದಿ

ಶ್ರೀರಾಜ್ ವಕ್ವಾಡಿ, May 5, 2021, 5:43 PM IST

5-4

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್ :  ಲಸಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಡ್ಡಪರಿಣಾಮಗಳು ಉಂಟಾಗಬಹುದೇ..? ಎಂಬ ಪ್ರಶ್ನೆ ಸಾಮಾನ್ಯವಾಗಿ ಹೆಚ್ಚಿನವರಲ್ಲಿದೆ. ಆದರೇ, ಒಂದು ಸಂಶೋಧನೆ ಲಸಿಕೆಯನ್ನು ತೆಗೆದುಕೊಳ್ಳುವುದರಿಂದ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವ ಸಂಭವ ಕಡಿಮೆ ಎಂದು ತಿಳಿಸಿದೆ.

ಹೌದು, ನುರಿತ ವಿಜ್ಞಾನಿಗಳು ನಡೆಸಿದ ಹೊಸ ಅಧ್ಯಯನವೊಂದು ಕೋವಿಡ್ 19 ಲಸಿಕೆ ಪಡೆದ ನಂತರ ಅಡ್ಡಪರಿಣಾಮಗಳನ್ನು ಅನುಭವಿಸುವ ಸಂಭವನೀಯತೆಯ ಬಗ್ಗೆ ವರದಿ ಮಾಡಿದೆ.

ಲಸಿಕೆಗಳನ್ನು ತೆಗೆದುಕೊಂಡ  ನಾಲ್ವರಲ್ಲಿ ಒಬ್ಬರು ಸಣ್ಣ ಮಟ್ಟಿನ ಅಲ್ಪಾವಧಿಯ ಅಡ್ಡಪರಿಣಾಮಗಳನ್ನು ಅನುಭವಿಸಿದ್ದಾರೆ ಎಂದು ಕಿಂಗ್ಸ್ ಕಾಲೇಜ್ ಲಂಡನ್ ನ ಸಂಶೋಧಕರು ಮಾಡಿದ ಅಧ್ಯಯನ ವರದಿ ತಿಳಿಸಿದೆ.

ಓದಿ : ಚಾ.ನಗರ ದುರಂತ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ: ನಿವೃತ್ತ ನ್ಯಾ. ಬಿ.ಎ ಪಾಟೀಲ್ ನೇಮಕ

ಪ್ರಮುಖವಾಗಿ ಈ ಅಡ್ಡಪರಿಣಾಮಗಳಲ್ಲಿ ತಲೆ ನೋವು, ದಣಿವು ಮತ್ತು ದೇಹಾಯಾಸ ಕಾಣಿಸಿಕೊಳ್ಳಬಹುದು ಎಂದು ಅಧ್ಯಯನ ಹೇಳಿದೆ.

ಬಹಳ ಪ್ರಮುಖವಾಗಿ ಕಿಂಗ್ಸ್ ಕಾಲೇಜ್ ಲಂಡನ್ ನ ಸಂಶೋಧಕರು ಈ ಅಧ್ಯಯನಕ್ಕಾಗಿ  ಫಿಜರ್ ಮತ್ತು ಅಸ್ಟ್ರಾಜೆನೆಕಾ ಲಸಿಕೆಗಳನ್ನು ತೆಗೆದುಕೊಂಡವರನ್ನು ಒಳಪಡಿಸಿಕೊಂಡಿದ್ದು, ಲಸಿಕೆ ತೆಗೆದುಕೊಂಡ 24 ಗಂಟೆಗಳ ಒಳಗೆ ಹೆಚ್ಚಿನ ಅಡ್ಡಪರಿಣಾಮಗಳು ಕಾಣಿಸಿಕೊಂಡಿದ್ದು ಮತ್ತು ಸರಾಸರಿ 1 ರಿಂದ 2 ದಿನಗಳವರೆಗೆ ಇರುತ್ತವೆ ಎಂದು ಸಂಶೋಧಕರು ಅಧ್ಯಯನ ವರದಿಯಲ್ಲಿ ತಿಳಿಸಿದ್ದಾರೆ.

ಈ ಅಧ್ಯಯನ  ದಿ ಲ್ಯಾನ್ಸೆಟ್ ಇನ್ ಫೆಕ್ಶಿಯಸ್ ಡಿಸೀಸಸ್ (The Lancet Infectious Diseases) ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದ್ದು, ಯುಕೆ ಲಸಿಕೆ ಅಭಿಯಾನದ ಡೇಟಾದ ಆಧಾರದ ಮೇಲೆ ಅಡ್ಡಪರಿಣಾಮಗಳ ಬಗ್ಗೆ ತಿಳಿಯಲು ಮಾಡಿದ ಮೊದಲ ದೊಡ್ಡ ಅಧ್ಯಯನ ಇದಾಗಿದೆ.

ಇನ್ನು, ಈ ಡೇಟಾವನ್ನು ZOE COVID ಸಿಂಪ್ಟಮ್ ಸ್ಟಡಿ (ರೋಗ ಲಕ್ಷಣಗಳ ಅಧ್ಯಯನ) ಮೊಬೈಲ್ ಅಪ್ಲಿಕೇಶನ್‌ ನಿಂದ ಪಡೆಯಲಾಗಿದೆ. ಡಿಸೆಂಬರ್ 8, 2020 ಮತ್ತು ಮಾರ್ಚ್ 10, 2021 ರ ತನಕ ಒಂದು ಅಥವಾ ಎರಡು ಡೋಸ್ ಫಿಜರ್ ಲಸಿಕೆ ಅಥವಾ ಅಸ್ಟ್ರಾಜೆನೆಕಾ ಲಸಿಕೆಯನ್ನು ಸ್ವೀಕರಿಸಿದ 6,27,383 ಮಂದಿಯ ಅನುಭವಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಸಂಶೋಧಕರು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಓದಿ : ನಾನು ಬದುಕಿದ್ದೇನೆ, ಸತ್ತಿಲ್ಲ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ : ನಟ ದೊಡ್ಡಣ್ಣ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.