ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸ್ಪೋಟ: 27 ಮಂದಿ ದುರ್ಮರಣ
Team Udayavani, Apr 25, 2021, 8:30 AM IST
ಬಾಗ್ದಾದ್: ಕೋವಿಡ್ ಆಸ್ಪತ್ರೆಯಲ್ಲಿ ಸಿಲಿಂಡರ್ ಟ್ಯಾಂಕರ್ ಸ್ಫೋಟವಾಗಿ ಬೆಂಕಿ ದುರಂತ ನಡೆದು 27 ಜನರು ಸಾವನ್ನಪ್ಪಿದ ಘಟನೆ ಇರಾಕ್ ರಾಜಧಾನಿ ಬಾಗ್ಧಾದ್ ನಲ್ಲಿ ನಡೆದಿದೆ.
ಬೆಂಕಿ ಅವಘಡದ ಸಮಯದಲ್ಲಿ ಆಸ್ಪತ್ರೆಯಲ್ಲಿ ಕನಿಷ್ಠ 120 ರೋಗಿಗಳಿದ್ದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಆಮ್ಲಜನಕದ ಸಿಲಿಂಡರ್ ಸ್ಫೋಟವೇ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಕೋವಿಡ್ ನಿರ್ಮೂಲನೆಗೆ ಜಾಗತಿಕ ಬೆಂಬಲ ಕೋರಿ ಟ್ವೀಟ್ ಮಾಡಿದ ಗ್ರೆಟಾ ಥನ್ ಬರ್ಗ್
ಬಾಗ್ದಾದ್ ನ ಇಬ್ನ್ ಅಲ್ ಖತೀಬ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಹಲವಾರು ಆ್ಯಂಬುಲೆನ್ಸ್ ಗಳ ಮೂಲಕ ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ವಾಸಕೋಶ ಸಂಬಂಧಿ ಐಸಿಯು ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಲ್ಲಿದ್ದ 120 ಮಂದಿಯಲ್ಲಿ 90 ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಇರಾಕ್ ಸರ್ಕಾರದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ಕನ್ನಡಿಗ ಮೋಹನ್ ಶಾಂತನಗೌಡರ್ ನಿಧನ