ಅತ್ಯಾಚಾರಿಗಳಿಗೆ “ನಪುಂಸಕತ್ವ’ ಶಿಕ್ಷೆ
Team Udayavani, Nov 19, 2021, 7:40 AM IST
ಇಸ್ಲಾಮಾಬಾದ್: ಒಂದಕ್ಕಿಂತ ಹೆಚ್ಚು ಬಾರಿ ಅತ್ಯಾಚಾರಗಳನ್ನೆಸಗಿರುವ ಅಪರಾಧಿಗಳನ್ನು ಔಷಧಗಳ ಮೂಲಕ ಶಾಶ್ವತವಾಗಿ ನಪುಂಸಕರನ್ನಾಗಿಸುವ ಶಿಕ್ಷೆ ಜಾರಿಗೊಳಿಸುವ ಮಸೂದೆಗೆ ಪಾಕಿಸ್ಥಾನ ಸಂಸತ್ತು ಒಪ್ಪಿಗೆ ನೀಡಿದೆ.
ಇತ್ತೀಚೆಗೆ, ಪಾಕಿಸ್ಥಾನದಲ್ಲಿ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದವು. ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವಂಥ ಕಠಿನ ಕಾನೂನು ಜಾರಿಯಾಗಬೇಕು ಎಂದು ಸಮಾಜದ ನಾನಾ ಸ್ತರಗಳಿಂದ ಒಕ್ಕೊರಲಿನ ಆಗ್ರಹವೂ ಮೂಡಿಬಂದಿತ್ತು.
ಈ ಹಿನ್ನೆಲೆಯಲ್ಲಿ ಪಾಕಿಸ್ಥಾನ ಸರಕಾರ ಈ ಮಸೂದೆಯನ್ನು ಸಿದ್ಧಪಡಿಸಿತ್ತು. ವರ್ಷದ ಹಿಂದೆಯೇ ಈ ಶಿಕ್ಷೆಯನ್ನು ಪಾಕಿಸ್ಥಾನ ಸರಕಾರ ಅಧ್ಯಾದೇಶ ಹೊರಡಿಸುವ ಜಾರಿಗೆ ತಂದಿತ್ತು. ಈಗ ಅದನ್ನು ಮಸೂದೆ ರೂಪದಲ್ಲಿ ಮಂಡಿಸಿ ಕಾನೂನಾಗಿ ಜಾರಿಗೆ ತಂದಿದೆ.
ಈ ಶಿಕ್ಷೆಯನ್ನು ಸರಕಾರ ರಚಿಸುವ ಪ್ರತ್ಯೇಕ ವೈದ್ಯಕೀಯ ಮಂಡಳಿಯಲ್ಲಿರುವ ತಜ್ಞರ ವತಿಯಿಂದ ಜಾರಿಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ