ಪಾಕ್ ಜೈಲಿನಲ್ಲಿದ್ದಾರೆ 546 ಭಾರತೀಯ ಖೈದಿಗಳು
Team Udayavani, Jul 2, 2017, 3:45 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಜೈಲುಗಳಲ್ಲಿ 500 ಮಂದಿ ಮೀನುಗಾರರು ಸೇರಿದಂತೆ ಒಟ್ಟು 546 ಮಂದಿ ಭಾರತೀಯರಿದ್ದಾರೆ ಎಂದು ಪಾಕ್ ಸರಕಾರ ನೀಡಿರುವ ಅಧಿಕೃತ ಮಾಹಿತಿ ತಿಳಿಸಿದೆ. ರಾಜತಾಂತ್ರಿಕ ಸಂಬಂಧಗಳ ಒಪ್ಪಂದದ ಪ್ರಕಾರ, ಎರಡೂ ದೇಶಗಳು ತಮ್ಮ ತಮ್ಮ ದೇಶದ ಜೈಲುಗಳಲ್ಲಿ ಇರುವ ಕೈದಿಗಳ ಪಟ್ಟಿಯನ್ನು ವರ್ಷಕ್ಕೆ ಎರಡು ಬಾರಿ ಅಂದರೆ ಜನವರಿ 1 ಮತ್ತು ಜುಲೈ 1ರಂದು ವಿನಿಮಯ ಮಾಡಿಕೊಳ್ಳುತ್ತವೆ. ಕಳೆದ ಜನವರಿಯಲ್ಲಿ ಪಾಕ್ ಸರಕಾರ 219 ಮೀನುಗಾರರನ್ನು ಬಿಡುಗಡೆ ಮಾಡಿತ್ತು. ಈ ತಿಂಗಳ 10ರಂದು 77 ಮೀನುಗಾರರು ಮತ್ತು ಒಬ್ಬ ನಾಗರಿಕನನ್ನು ಬಿಡುಗಡೆ ಮಾಡಲಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು