ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಭಾರತದ ಮೇಲೆ ಯುದ್ಧಕ್ಕೆ ಸಿದ್ಧ; ಇಮ್ರಾನ್ ಖಾನ್

Team Udayavani, Aug 14, 2019, 5:40 PM IST

ಇಸ್ಲಾಮಾಬಾದ್;ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ವಿರುದ್ಧ ಯುದ್ಧಕ್ಕೂ ಸಿದ್ಧ ಎಂಬುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡುವ ಮೂಲಕ ಭಾರತವನ್ನು ಕೆಣಕುವ ಪ್ರಯತ್ನ ಮುಂದುವರಿಸಿರುವುದಾಗಿ ವರದಿ ತಿಳಿಸಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮಾತನಾಡಿರುವ ಖಾನ್, ಕಾಶ್ಮೀರದ ಸ್ವತಂತ್ರಕ್ಕಾಗಿ ಪಾಕ್ ಜನರು ಹೋರಾಡಲು ಸಿದ್ದರಾಗಿದ್ದಾರೆ ಎಂದು ಹೇಳಿರುವುದಾಗಿ ವರದಿ ವಿವರಿಸಿದೆ. ಭಾರತೀಯ ಜನತಾ ಪಕ್ಷದ ಮಾತೃಸಂಸ್ಥೆಯಾದ ರಾಷ್ಟ್ರೀಯ ಸ್ವಯಂ ಸೇವಕ(ಆರ್ ಎಸ್ ಎಸ್) ವಿರುದ್ಧ ಖಾನ್ ವಾಗ್ದಾಳಿ ನಡೆಸಿದ್ದಾರೆ.

ಭಾರತದಲ್ಲಿ ಮುಸ್ಲಿಮರನ್ನು ಥಳಿಸಲಾಗುತ್ತಿದೆ. ಇದರಿಂದಾಗಿ ಮುಸ್ಲಿಂ ಸಮುದಾಯ ಹೆದರಿಕೆಯಲ್ಲಿಯೇ ಬದುಕುವಂತಾಗಿದೆ ಎಂದು ಖಾನ್ ಆರೋಪಿಸಿರುವುದಾಗಿ ವರದಿ ತಿಳಿಸಿದೆ. ಕಣಿವೆ ರಾಜ್ಯದ ಬಗೆಗಿನ ಇತ್ತೀಚೆಗಿನ ಬೆಳವಣಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ವಿಚಾರದಲ್ಲಿ ಭಾರತ ಸರಕಾರ ತಂತ್ರಗಾರಿಕೆಯ ಮೋಸ ಎಸಗಿದೆ ಎಂದು ಆರೋಪಿಸಿರುವ ಖಾನ್, ಪ್ರಧಾನಿ ನರೇಂದ್ರ ಮೋದಿ ತಮ್ಮ ಕೊನೆಯ ಆಟವನ್ನು ಆಡಿದ್ದಾರೆ. ಆದರೆ ಇದರಿಂದ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂಬುದು ಇಮ್ರಾನ್ ಖಾನ್ ಹೇಳಿಕೆಯಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ