ಜಾಧವ್ ಕುಟುಂಬಕ್ಕೆ ವೀಸಾ ಕೊಟ್ಟ ಪಾಕ್
Team Udayavani, Dec 21, 2017, 7:00 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ ಜಾಧವ್ ಪತ್ನಿ, ತಾಯಿಗೆ ಪಾಕಿಸ್ತಾನ ಸರ್ಕಾರ ವೀಸಾ ನೀಡಿದೆ. ಡಿ.25ರಂದು ಅವರು ಇಸ್ಲಾಮಾಬಾದ್ಗೆ ತೆರಳಲಿದ್ದಾರೆ. ಈ ಬಗ್ಗೆ ಬುಧವಾರ ನೆರೆಯ ರಾಷ್ಟ್ರದ ವಿದೇಶಾಂಗ ಕಚೇರಿ ಮಾಹಿತಿ ನೀಡಿದ್ದು, ಸರ್ಕಾರದ ಸೂಚನೆಯಂತೆ ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಗೆ ನಿರ್ದೇಶ ನೀಡಲಾಗಿತ್ತು. ಅದರಂತೆ ನಡೆದುಕೊಳ್ಳಲಾಗಿದೆ ಎಂದಿದೆ. ಜಾಧವ್ ಪತ್ನಿ, ತಾಯಿ ಜತೆಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಅವರ ಜತೆ ನವದೆಹಲಿಯಿಂದ ಪ್ರಯಾಣಿಸಲಿದ್ದಾರೆ. ಕೆಲ ದಿನಗಳ ಹಿಂದೆ ವೀಸಾ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾಗ ಅದನ್ನು ಪಾಕ್ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ