ಮಾರುಕಟ್ಟೆಯಲ್ಲಿ ಸ್ಫೋಟ; 13 ಮಂದಿಗೆ ಗಾಯ
Team Udayavani, Dec 20, 2022, 8:25 AM IST
ಇಸ್ಲಾಮಾಬಾದ್: ಮಾರುಕಟ್ಟೆಯೊಂದರಲ್ಲಿ ಸ್ಫೋಟ ಸಂಭವಿಸಿ ಸುಮಾರು 13 ಜನರು ಗಾಯಗೊಂಡಿರುವ ಘಟನೆ ಬಲೂಚಿಸ್ತಾನ್ ಪ್ರಾಂತ್ಯದ ಖುಸ್ದಾರ್ ಜಿಲ್ಲೆಯಲ್ಲಿ ಡಿ.19 ರಂದು ನಡೆದಿದೆ ಎಂದು ವರದಿ ತಿಳಿಸಿದೆ.
ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಸೈಕಲ್ಗೆ ಸ್ಫೋಟಕಗಳನ್ನು ಅಳವಡಿಸಲಾಗಿದ್ದು, ರಿಮೋಟ್ ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದು, ರಾತ್ರಿ ಸಮಯವಾಗಿದ್ದರಿಂದ ಆ ಪ್ರದೇಶದ ಸುತ್ತಮುತ್ತ ಕಡಿಮೆ ಜನರಿದ್ದರಿಂದ ಹಾಗೂ ಈ ಸಮಯಕ್ಕೆ ಹೆಚ್ಚಿನ ಅಂಗಡಿಗಳು ಮುಚ್ಚಲ್ಪಟ್ಟಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದರು.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !