ಕಾಠ್ಮಂಡು: ಭೀಕರ ವಿಮಾನ ದುರಂತ; 40ಕ್ಕೂ ಹೆಚ್ಚು ಬಲಿ
Team Udayavani, Mar 12, 2018, 3:43 PM IST
ಕಾಠ್ಮಂಡು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ವಿಮಾನ ದುರಂತವೊಂದು ಸೋಮವಾರ ಸಂಭವಿಸಿದ್ದು, ಅಮೆರಿಕಾ- ಬಾಂಗ್ಲಾದ ನಡುವೆ ಸಂಚರಿಸುವ ಬಾಂಗ್ಲಾ ವಿಮಾನ ಲ್ಯಾಂಡಿಂಗ್ ವೇಳೆ ಹೊತ್ತಿ ಉರಿದಿದೆ.ಪರಿಣಾಮವಾಗಿ 40 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಸಿಬಂದಿಗಳು ಸೇರಿ 71 ಮಂದಿ ವಿಮಾನದಲ್ಲಿ ಇದ್ದರು ಎನ್ನಲಾಗಿದ್ದು , ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟು ಹಲವರನ್ನು ರಕ್ಷಣೆ ನಡೆಸಿರುವ ಬಗ್ಗೆ ವರದಿಯಾಗಿದೆ.
ರನ್ ವೇಯಲ್ಲಿ ಇಳಿಯುತ್ತಿದ್ದಂತೆ ವಿಮಾನ ಅವಘಡಕ್ಕೀಡಾಗಿದ್ದು, ವಿಮಾನ ನಿಲ್ದಾಣದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.
ರಕ್ಷಣಾ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು ಇದುವರೆಗೆ 22 ಮಂದಿ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ತಾಗಿ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ