ಪ್ರಧಾನಿ ನರೇಂದ್ರ ಮೋದಿಗೆ ಯುಎಇ ಸರಕಾರದ ಪ್ರತಿಷ್ಠಿತ ಝಯೇದ್ ಪುರಸ್ಕಾರ ನೀಡಿ ಗೌರವ

Team Udayavani, Aug 24, 2019, 4:27 PM IST

ಯುಎಇ: ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಪ್ರಯತ್ನಿಸಿದ್ದನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿಗೆ ಶನಿವಾರ ಯುಎಇ ಸರಕಾರದ ಅತ್ಯುನ್ನದ ನಾಗರಿಕ ಪುರಸ್ಕಾರವಾದ “ಆರ್ಡರ್ ಆಫ್ ಝಯೇದ್” ಅನ್ನು ನೀಡಿ ಪುರಸ್ಕರಿಸಲಾಯಿತು.

ಅಬುಧಾಬಿಯ ದೊರೆ ಶೇಕ್ ಮೊಹಮ್ಮದ್ ಬಿನ್ ಝಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಷ್ಠಿತ ಆರ್ಡರ್ ಆಫ್ ಝಯೇದ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಈ ಮೊದಲು ಆರ್ಡರ್ ಆಫ್ ಝಯೇದ್ ಪ್ರಶಸ್ತಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್, 2ನೇ ಎಲಿಜಬೆತ್ ರಾಣಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರಿಗೂ ನೀಡಿ ಪುರಸ್ಕರಿಸಲಾಗಿತ್ತು.

ಫ್ರಾನ್ಸ್ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಅವರು ಶುಕ್ರವಾರ ಯುಎಇಗೆ ಆಗಮಿಸಿದ್ದರು. ಶನಿವಾರ ಬೆಳಗ್ಗೆ ಅಬುಧಾಬಿಯ ದೊರೆ ಶೇಕ್ ಮೊಹಮ್ಮದ್ ಬಿನ್ ಝಯೇದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಚಾರಗಳ ಕುರಿತು ಚರ್ಚಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ