ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ
Team Udayavani, Jan 30, 2023, 7:10 AM IST
ಮೆಲ್ಬರ್ನ್: ಆಸ್ಟ್ರೇಲಿಯಾದ ಮೆಲ್ಬರ್ನ್ ನ ಫೆಡರೇಶನ್ ಸ್ಕ್ವೇರ್‌ನಲ್ಲಿ ಭಾನುವಾರ ಭಾರತದ ಧ್ವಜ ಹಿಡಿದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಮೂಲದವರ ಮೇಲೆ ಖಡ್ಗ ಹಿಡಿದ ಸುಮಾರು 40 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ, ಖಲಿಸ್ತಾನಿ ಪರ ಚಟುವಟಿಕೆಗಳ ವಿರುದ್ಧ ಭಾರತೀಯ ಮೂಲದವರು ನಿಶಸ್ತ್ರರಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ನುಗ್ಗಿದ ಖಡ್ಗ ಸೇರಿದಂತೆ ಹರಿತವಾದ ಆಯುಧಗಳು, ಬೆತ್ತ ಹಿಡಿದ ಸುಮಾರು 40 ಮಂದಿ ಖಲಿಸ್ತಾನಿ ಬೆಂಬಲಿಗರು ಏಕಾಏಕಿ ಭಾರತೀಯ ಮೂಲದವರ ಮೇಲೆ ಎರಗಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಗುಂಪುಗಳನ್ನು ಚದುರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ದಾಳಿಯನ್ನು ಆಸ್ಟ್ರೇಲಿಯಾದ ಭಾರತೀಯ ಸಮುದಾಯ ತೀವ್ರವಾಗಿ ಖಂಡಿಸಿದೆ. “ದಾಳಿಯನ್ನು ಹಾಗೂ ಆಸ್ಟ್ರೇಲಿಯಾದಲ್ಲಿ ಭಾರತ ವಿರೋಧಿ, ಖಲಿಸ್ತಾನಿ ಪರ ಚಟುವಟಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಭಾರತದ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡಲು ಸಮಾಜ ವಿರೋಧಿ ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,’ ಎಂದು ಬಿಜೆಪಿ ವಕ್ತಾರ ಮಂಜಿಂದರ್ ಸಿಂಗ್ ಸಿರ್ಸಾ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಲವ್ ಜಿಹಾದ್ ವಿರುದ್ಧ ಮುಂಬೈನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್
ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ
ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ
ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ
ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ