ಚುನಾವಣೆಯಲ್ಲಿ ಸೋಲು: ಅಮೆರಿಕದಲ್ಲಿ ಟ್ರಂಪ್ ಬೆಂಬಲಿಗರಿಂದ ಪ್ರತಿಭಟನೆ, ಭುಗಿಲೆದ್ದ ಹಿಂಸಾಚಾರ
Team Udayavani, Nov 15, 2020, 1:26 PM IST
ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಹಲವೆಡೆ ಹಿಂಸಾಚಾರ ನಡೆದಿರುವ ಬಗ್ಗೆಯೂ ವರದಿಯಾಗಿದೆ.
ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ಗೆಲುವು ಸಾಧಿಸಿದ್ದಾರೆ. ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಫಲಿತಾಂಶ ದೋಷಪೂರಿತವಾಗಿದೆ ಎಂದು ಟ್ರಂಪ್ ಬೆಂಗಲಿಗರು ವಾಷಿಂಗ್ಟನ್, ಅರಿಜೋನಾ, ಫ್ಲಾರಿಡಾಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್ ಪರ ಲಕ್ಷಾಂತರ ಬೆಂಬಲಿಗರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಜೋ ಬೈಡನ್ ಬೆಂಬಲಿಗರೂ ಕೂಡ ಸ್ಥಳಕ್ಕೆ ಬಂದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಟಾಪಟಿ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಖ್ಯಾತ ಬಂಗಾಳಿ ನಟ ಸೌಮಿತ್ರ ಚಟರ್ಜಿ ನಿಧನ
ಬ್ಲ್ಯಾಕ್ ಲೈವ್ಸ್ ಮ್ಯಾಟರ್(ಹಾಗೂ ಟ್ರಂಪ್ ಅವರನ್ನು ಬೆಂಬಲಿಸುವ ಪ್ರೌಡ್ ಬಾಯ್ಸ್ ಗ್ರೂಪ್ ನಡುವೆ ಜಟಾಪಟಿ ನಡೆದಿದೆ. ಪರಸ್ಪರ ಬೆದರಿಕೆ ಹಾಕಿ, ಬಾಟಲಿಗಳನ್ನು ಎಸೆದು ಹಲ್ಲೆ ನಡೆಸಿದರು. ಘಟನೆ ವೇಳೆ ಟ್ರಂಪ್ ಹಾಗೂ ಬೈಡನ್ ಬೆಂಬಲಿಗರು ಗಂಭೀರವಾಗಿ ಗಾಯಗೊಂಡಿದ್ದು, ಹಿಂಸಾಚಾರ ಹತ್ತಿಕ್ಕುವ ಸಲುವಾಗಿ ಪೊಲೀಸರು ಈವರೆಗೂ ಹತ್ತು ಮಂದಿಯನ್ನು ಬಂಧಿಸಿದ್ದಾರೆ.