
ಕೊಟ್ಟ ಮಾತಿನಂತೆ ರಾಜೀನಾಮೆ ಕೊಟ್ಟ ಪ್ರಚಂಡ
Team Udayavani, May 25, 2017, 2:16 AM IST

ಕಾಠ್ಮಂಡು: ಅಧಿಕಾರ ಹಂಚಿಕೆ ಕುರಿತು ಮಾಡಿಕೊಂಡ ಒಪ್ಪಂದಕ್ಕೆ ತಲೆಬಾಗಿ ನೇಪಾಳದ ಪ್ರಧಾನಿ ಪ್ರಚಂಡ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಮೈತ್ರಿ ಪಕ್ಷವಾದ ನೇಪಾಳ ಕಾಂಗ್ರೆಸ್‌ನ ಮುಖ್ಯಸ್ಥರಾದ ಶೇರ್ ಬಹದ್ದೂರ್ ದೇಬ ಅವರಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಹುದ್ದೆ ತ್ಯಾಗ ಮಾಡಿದ್ದಾರೆ.
ಮಂಗಳವಾರ ಸಂಸತ್ತಿನಲ್ಲಿ ಭಾಷಣ ಮಾಡುವಾಗಲೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಹೊಸದಾಗಿ ಚುನಾವಣೆ ನಡೆಯುವರೆಗೆ ಅಧಿಕಾರವನ್ನು ಸಮಾನವಾಗಿ ಹಂಚಿಕೊಳ್ಳಲು ಕಳೆದ ವರ್ಷದ ಆಗಸ್ಟ್‌ನಲ್ಲಿ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದು, ಅದಕ್ಕೆ ಬದ್ಧವಾಗಿ ಪ್ರಚಂಡ ನಡೆದುಕೊಂಡಿದ್ದಾರೆ. ಇನ್ನು 10 ದಿನಗಳಲ್ಲಿ ಹೊಸ ಪ್ರಧಾನಿ ಶೇರ್ ಬಹದ್ದೂರ್ ದೇಬ ಅವರು ಸಂಸತ್‌ನಲ್ಲಿ ಬಹುಮತ ಸಾಬೀತು ಮಾಡಬೇಕಿದೆ. ಇದೇ ವೇಳೆ 1997ರಿಂದ ಈಚೆಗೆ ನೇಪಾಳದಲ್ಲಿ ಅತಿ ಹೆಚ್ಚು ರಾಜಕೀಯ ಅಸ್ಥಿರತೆ ಕಾಣಿಸಿಕೊಂಡಿದ್ದು, ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿಲ್ಲ. ಹೀಗಾಗಿ ಇಲ್ಲಿ ಯಾವ ಪಕ್ಷವೂ 5 ವರ್ಷಗಳ ಪೂರ್ಣ ಆಡಳಿತ ನಡೆಸಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ