ಕಚ್ಚಾ ತೈಲ ಬೆಲೆ ಏರಿಸಲು ಸೌದಿ ದೇಶಗಳ ಒಲವು

Team Udayavani, Sep 10, 2019, 5:10 AM IST

ಅಬುಧಾಬಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಉತ್ಪಾದನೆಯನ್ನು ಕಡಿತಗೊಳಿಸಬೇಕು ಎಂದು ಸೌದಿ ಅರೇಬಿಯಾದ ಇಂಧನ ಸಚಿವ ರಾಜಕುಮಾರ ಅಬ್ದುಲ್ಲ ಜೀಜ್‌ ಬಿನ್‌ ಸಲ್ಮಾನ್‌ ಹೇಳಿದ್ದಾರೆ. ಹೀಗಾಗಿ ಒಂದು ವೇಳೆ ಸೌದಿ ದೇಶಗಳು ಕಚ್ಚಾ ತೈಲ ಉತ್ಪಾದನೆ ಕಡಿತಗೊಳಿಸಿದರೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾನುವಾರವಷ್ಟೇ ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು, ನಮ್ಮ ತೈಲ ನೀತಿಯ ಮೂಲ ನಿಯಮವನ್ನು ಬದಲಿಸುವುದಿಲ್ಲ ಎಂದಿದ್ದಾರೆ.

ಗುರುವಾರ ಈ ಸಂಬಂಧ ಅಬುಧಾಬಿಯಲ್ಲಿ ತೈಲೋತ್ಪಾದಕ ರಾಷ್ಟ್ರಗಳ ಸಭೆ ನಡೆಯಲಿದ್ದು, ಇದರಲ್ಲಿ ಅಬ್ದುಲ್ಲಜೀಜ್‌ ಕೂಡ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ತೈಲ ಉತ್ಪಾದನೆ ಕಡಿತದ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ತೈಲ ಉತ್ಪಾದನೆ ಕಡಿತಗೊಳಿಸುವುದರಿಂದ ಎಲ್ಲ ಒಪೆಕ್‌ ಸದಸ್ಯರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈಗಾಗಲೇ ಅಮೆರಿಕ ಮತ್ತು ಇರಾನ್‌ ಮಧ್ಯೆ ತೈಲ ಮಾರಾಟ ಕುರಿತಂತೆ ಸಂಘರ್ಷ ನಡೆಯುತ್ತಿದ್ದು, ಈ ಮಧ್ಯೆಯೇ ಒಪೆಕ್‌ ರಾಷ್ಟ್ರಗಳು ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದೂ ಹೇಳಲಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ