ದೌರ್ಜನ್ಯಕ್ಕೆ ಐದು ವರ್ಷ ಜೈಲು
Team Udayavani, May 31, 2018, 6:00 AM IST
ರಿಯಾದ್: ಸೌದಿ ಅರೇಬಿಯಾದಲ್ಲಿ ಮಹಿಳೆಯರ ವಿರುದ್ಧದ ದೌರ್ಜನ್ಯಕ್ಕೆ 5 ವರ್ಷ ಜೈಲು ಮತ್ತು 53 ಲಕ್ಷ ರೂ. (80 ಸಾವಿರ ಡಾಲರ್) ದಂಡ. ಇಂಥದ್ದೊಂದು ಮಹತ್ವದ ಕಾನೂನನ್ನು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ನೇತೃತ್ವದ ಸರ್ಕಾರ ಜಾರಿ ಮಾಡಿದೆ.
ಸೌದಿ ಸರ್ಕಾರದ ಸಲಹಾ ಮಂಡಳಿ ”ಶೌರಾ ಕೌನ್ಸಿಲ್’, ಈ ಕಾನೂನು ಜಾರಿಗೆ ತರುವಂತೆ ಸೌದಿ ಸಂಪುಟಕ್ಕೆ ಶಿಫಾರಸು ಮಾಡಿತ್ತು. ಇದಕ್ಕೆ, ಸೋಮವಾರದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಕ್ರಾಂತಿಕಾರಕ ಬದಲಾವಣೆಗಳನ್ನು ತಂದಿರುವ ಸರ್ಕಾರ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧವೂ ಕಠಿಣವಾಗಿ ವರ್ತಿಸಲು ಮುಂದಾಗಿದೆ. ಇತ್ತೀಚೆಗೆ, ಚಿತ್ರ ಮಂದಿರಗಳಿಗೆ ದಶಕಗಳಿಂದ ಮಹಿಳೆಯರ ಮೇಲಿದ್ದ ನಿಷೇಧ ತೆರವುಗೊಳಿಸಲಾಗಿದೆ. ಕಾರ್ಯಕ್ರಮಗಳಿಗೆ ಪುರುಷರ ಜತೆ ಮಹಿಳೆಯರಿಗೂ ಮುಕ್ತ ಪ್ರವೇಶ, ಡ್ರೈವಿಂಗ್ ಲೈಸನ್ಸ್ ನೀಡುವಿಕೆಯಂಥ ಸೌಲಭ್ಯಗಳನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!