ಕರಾಚಿ: ಚೀನ ಕಾನ್ಸುಲೇಟ್ ಬಳಿ ಗುಂಡು ಹಾರಾಟ; ಇಬ್ಬರ ಹತ್ಯೆ : ವರದಿ
Team Udayavani, Nov 23, 2018, 11:39 AM IST
ಕರಾಚಿ : ಇಲ್ಲಿನ ಚೀನ ಕಾನ್ಸುಲೇಟ್ ಸಮೀಪ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡು ಹಾರಾಟದಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಇದೇ ವೇಳೆ ಕ್ಲಿಫ್ಟನ್ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಅದರ ಕಾರಣ ಮತ್ತು ಸ್ವರೂಪ ಏನೆಂಬುದು ಗೊತ್ತಾಗಿಲ್ಲ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.
ಘಟನೆಯನ್ನು ಅನುಸರಿಸಿ ಭದ್ರತಾ ಪಡೆಗಳ ಕಾರ್ಯಾಚರಣೆ ಸಾಗಿದೆ. ಗುಂಡಿನ ಚಕಮಕಿಯನ್ನು ಅನುಸರಿಸಿ ಸ್ಥಳದಲ್ಲಿ ಭಾರೀ ಭದ್ರತಾ ಪಡೆಗಳನ್ನು ಛಾಯಾ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ಪ್ರದೇಶವು ಭಾರೀ ಭದ್ರತೆಯದ್ದಾಗಿದ್ದು ಇದನ್ನು ಕಟ್ಟೆಚ್ಚರದ ಕೆಂಪು ವಲಯ ಎಂದೇ ಪರಿಗಣಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !