Facebook ಗೆಳೆತಿಗಾಗಿ ಪಾಕ್ ನಲ್ಲಿ 6ವರ್ಷ ಬಂಧಿಯಾಗಿದ್ದ ಮುಂಬೈ ಯುವಕ!

Team Udayavani, Dec 18, 2018, 2:48 PM IST

jail.jpg

ನವದೆಹಲಿ/ಇಸ್ಲಾಮಾಬಾದ್:ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗುವ ಕುತೂಹಲದಿಂದ ಅಕ್ರಮವಾಗಿ ಪಾಕಿಸ್ತಾನದೊಳಕ್ಕೆ ಪ್ರವೇಶಿಸಿ ಜೈಲುಶಿಕ್ಷೆ ಅನುಭವಿಸಿದ್ದ ಮುಂಬೈಯ ಯುವಕ ಹಮೀದ್ ನೆಹಾಲ್ ಅನ್ಸಾರಿಯನ್ನು ಪಾಕ್ ಸರ್ಕಾರ ಮಂಗಳವಾರ ಬಿಡುಗಡೆಗೊಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಈ ಬಗ್ಗೆ ಪ್ರಕಟಣೆ ನೀಡಿದ್ದು, ಈ ಪ್ರಕರಣ ಅನ್ನಾರಿ ಕುಟುಂಬ ವರ್ಗಕ್ಕೆ ದೊಡ್ಡ ನಿಟ್ಟುಸಿರು ಬಿಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ಜೈಲಿನಲ್ಲಿರುವ ಹಮೀದ್ ನೆಹಾಲ್ ಅನ್ಸಾರಿಯ ಜೈಲುಶಿಕ್ಷೆ ಮುಗಿದ ಕೂಡಲೇ ಭಾರತಕ್ಕೆ ಕಳುಹಿಸುವಂತೆ ಕೇಂದ್ರ ಸರ್ಕಾರ ಡಿಸೆಂಬರ್ 11ರಂದು ಪಾಕಿಸ್ತಾನಕ್ಕೆ ಮನವಿ ಮಾಡಿತ್ತು. ಏತನ್ಮಧ್ಯೆ ಭಾನುವಾರ ಅನ್ಸಾರಿಯ ಜೈಲುಶಿಕ್ಷೆ ಪೂರ್ಣಗೊಂಡಿದ್ದರೂ ಕೂಡಾ ಪಾಕಿಸ್ತಾನ ಆತನನ್ನು ಗೂಢಚಾರ ಎಂದೇ ಬಣ್ಣಿಸಿತ್ತು ಎಂದು ವರದಿ ವಿವರಿಸಿದೆ.

ಫೇಸ್ ಬುಕ್ ಗೆಳತಿಯ ಬಲವಂತದ ಮದುವೆ ನಿಲ್ಲಿಸಲು ಹೋಗಿದ್ದ!

33ರ ಹರೆಯದ ಇಂಜಿನಿಯರ್ ಅನ್ಸಾರಿ ಖೈಬರ್ ಫಾಖ್ತುನ್ ಖಾವಾ ಪ್ರಾಂತ್ಯದ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಗೆಳತಿಯ ಬಲವಂತದ ವಿವಾಹವನ್ನು ತಡೆದು ರಕ್ಷಿಸುವ ನಿಟ್ಟಿನಲ್ಲಿ 2012ರ ನವೆಂಬರ್ 12ರಂದು ಅಫ್ಘಾನಿಸ್ತಾನದ ಗಡಿದಾಟಿ ಜಲಾಲಬಾದ್ ನಿಂದ ಪೇಶಾವರಕ್ಕೆ ತೆರಳಿ ಪಾಕಿಸ್ತಾನವನ್ನು ಪ್ರವೇಶಿಸಿದ್ದ.

2012ರ ನವೆಂಬರ್ ನಿಂದ ನಾಪತ್ತೆಯಾಗಿದ್ದ ಅನ್ಸಾರಿಯನ್ನು ಹುಡುಕಿಕೊಡುವಂತೆ ಮನೆಯವರು ಮನವಿ ಮಾಡಿದ್ದರು. ಏತನ್ಮಧ್ಯೆ ಕಾನೂನು ಬಾಹಿರವಾಗಿ ಪಾಕಿಸ್ತಾನವನ್ನು ಪ್ರವೇಶಿಸಿದ್ದ ಅನ್ಸಾರಿ ಪಾಕ್ ಗುಪ್ತಚರ ಇಲಾಖೆಯ ಕೈಗೆ ಸಿಕ್ಕಿಬಿದ್ದಿದ್ದ. ಅನ್ಸಾರಿ ಭಾರತದ ಗೂಢಚಾರ ಎಂದೇ ಪ್ರತಿಪಾದಿಸಿದ್ದು, ಸೇನಾ ಕೋರ್ಟ್ ಅನ್ಸಾರಿಗೆ ಮೂರು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಹೀಗೆ ಸುಮಾರು ಆರು ವರ್ಷಗಳ ಕಾಲ ಬಂಧನದಲ್ಲಿದ್ದ ಅನ್ಸಾರಿ ಬಿಡುಗಡೆಗಾಗಿ ಮುಂಬೈ ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ಕೃಷ್ಣ ಹೆಗಡೆ ಅವರು ಸಹಾಯ ಹಸ್ತ ಚಾಚಿದ್ದರು. ನವದೆಹಲಿಯ ಪಾಕಿಸ್ತಾನದ ಹೈಕಮಿಷನ್ ಗೆ ತೆರಳಿ ಭಾರತಕ್ಕೆ ವಾಪಸ್ಸಾಗುವ ಪ್ರಕ್ರಿಯೆನ್ನು ಪೂರ್ಣಗೊಳಿಸಿದ್ದರು ಎಂದು ವರದಿ ತಿಳಿಸಿದೆ.

ಪಾಕಿಸ್ತಾನದ ಜೈಲಿನಿಂದ ಬಿಡುಗಡೆಗೊಂಡ ಅನ್ಸಾರಿಯನ್ನು ಅಧಿಕಾರಿಗಳು ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಇಂದು ಮಧ್ಯಾಹ್ನ ಹಸ್ತಾಂತರಿಸಿರುವುದಾಗಿ ಪಿಐಪಿಎಫ್ ಪಿಡಿಯ ಪ್ರಧಾನ ಕಾರ್ಯದರ್ಶಿ ಜತಿನ್ ದೇಸಾಯಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.