ಶ್ರೀಲಂಕಾ ನೌಕಾಪಡೆಯಿಂದ 43 ಭಾರತೀಯ ಮೀನುಗಾರರ ಬಂಧನ
Team Udayavani, Dec 19, 2021, 8:30 PM IST
ಕೊಲಂಬೋ: ಶ್ರೀಲಂಕಾದ ಸಮುದ್ರ ಭಾಗದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ 43 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಶನಿವಾರ ಬಂಧಿಸಿದೆ.
ಅವರು ಪ್ರಯಾಣಿಸುತ್ತಿದ್ದ ಆರು ದೋಣಿಗಳನ್ನೂ ವಶ ಪಡಿಸಿಕೊಳ್ಳಲಾಗಿದೆ. ಡೆಲ್ಫ್ಟ್ ದ್ವೀಪದ ಆಗ್ನೇಯ ದಿಕ್ಕಿನಲ್ಲಿ ಮೀನುಗಾರಿಕೆ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ.
ಉತ್ತರ ನೌಕ ಕಮಾಂಡ್ ಗೆ ಹೊಂದಿಕೊಂಡ 4ಎಫ್ ಎ ಎಫ್ ನೌಕೆ ಮೂಲಕ ಕೋವಿಡ್ ಶಿಷ್ಠಾಚಾರ ಪಾಲನೆಯೊಂದಿಗೆ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಪ್ರೀತಿ ನಿರಾಕರಿಸಿದಕ್ಕೆ ಬೆಂಕಿ ಹಚ್ಚಿ ತಾನೂ ಜೀವ ಕಳೆದುಕೊಂಡ!
ಬಂಧಿತರಿಗೆ ರಾಪಿಡ್ ಆಂಟಿಜೆನ್ ಪರೀಕ್ಷೆ ನಂತರ ಕಾನೂನು ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ ಎಂದು ಶ್ರೀಲಂಕಾ ನೌಕಪಡೆ ತಿಳಿಸಿದೆ.
ನೌಕಾಪಡೆಯು ಶನಿವಾರ ರಾತ್ರಿ ವಿಶೇಷ ಕಾರ್ಯಾಚರಣೆ ಮಾಡಿದ್ದು, ಮೀನುಗಾರರನ್ನು ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನ್ಯೂಯಾರ್ಕ್ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ
ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್ನಲ್ಲಿ ಪ್ರಧಾನಿ ಅಭಿಮತ
ಈ ಹೋಟೆಲ್ ನಲ್ಲಿ ಆಂಟಿ ಎಂದರೆ ಆರ್ಡರ್ ಕ್ಯಾನ್ಸಲ್! 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಈ ನಿಯಮ
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಆರ್ಥಿಕ ದುಸ್ಥಿತಿ: ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ