#StayStrongIndia: ಕೋವಿಡ್ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತ ಯುಎಇ
Team Udayavani, Apr 26, 2021, 10:04 AM IST
ದುಬೈ: ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ತೀವ್ರಗತಿಯಲ್ಲಿ ಸೋಂಕಿತರು ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಭಾರತಕ್ಕೆ ಅನೇಕ ದೇಶಗಳು ಬೆಂಬಲಕ್ಕೆ ನಿಂತಿದ್ದು, ಯುಎಇ ಕೂಡಾ ಭಾರತಕ್ಕೆ ಆತ್ಮಸ್ಥೈರ್ಯ ತುಂಬಿದ್ದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿದೆ.
ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮತ್ತು ಅಬುದಾಭಿಯ ಅಡನಾಕ್ ಮುಖ್ಯ ಕಚೇರಿಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ವಿದ್ಯುತ್ ದೀಪಗಳಿಂದ ಪ್ರತಿಬಿಂಬಿಸುವ ಮೂಲಕ ಭಾರತಕ್ಕೆ ಬೆಂಬಲ ಸೂಚಿಸಿದೆ.
ಇದನ್ನೂ ಓದಿ:ವಾರಾಂತ್ಯದ ಕರ್ಫ್ಯೂ ಅಂತ್ಯ: ಜನರ ಓಡಾಟ ಆರಂಭ! ಇರಲಿ ಸಾಮಾಜಿಕ ಅಂತರ
ಬೃಹತ್ ಕಟ್ಟಡಗಳ ಮೇಲೆ ‘ಸ್ಟೇ ಸ್ಟ್ರಾಂಗ್ ಇಂಡಿಯಾ’ ಎಂಬ ವಾಕ್ಯ ಮೂಡಿಸಿ ಅರಬ್ ದೇಶವು ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಆತ್ಮಸ್ಥೈರ್ಯ ತುಂಬಿದೆ.
ಭಾರತದಲ್ಲಿ ರವಿವಾರ 3,52,991 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. 24 ಗಂಟೆ ಅವಧಿಯಲ್ಲಿ 2812 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 2,19,272 ಮಂದಿ ಗುಣಮುಖರಾಗಿದ್ದಾರೆ.
ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಇಲ್ಲವೇ? ಹಿಂದೆ ಲಾಕ್ಡೌನ್ ವೇಳೆ ಇದ್ದ ನಿಯಮ ಈಗಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ