ಬಗ್ಧಾದ್ ವಿದ್ಯುತ್ ಘಟಕದ ಮೇಲೆ ಉಗ್ರರ ದಾಳಿ: 7 ಸಾವು
Team Udayavani, Sep 2, 2017, 3:24 PM IST
ಸಮಾರ್ರಾ, ಬಗ್ಧಾದ್ : ಉತ್ತರ ಬಗ್ಧಾದ್ನ ಸಮಾರ್ರಾ ಎಂಬಲ್ಲಿರುವ ಉಷ್ಣ ವಿದ್ಯುತ್ ಸ್ಥಾವರದ ಮೇಲೆ ದಾಳಿ ಮಾಡಲೆತ್ನಿಸಿದ ಆತ್ಮಾಹುತಿ ಬಾಂಬರ್ಗಳನ್ನು ತಮ್ಮನ್ನು ತಾವು ಸ್ಫೋಟಿಸಿಕೊಂಡ ಕಾರಣ ಏಳು ಜನರು ಮೃತಪಟ್ಟು 12 ಮಂದಿ ಗಾಯಗೊಂಡಿರುವುದಾಗಿ ಇರಾಕ್ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಬಗ್ಧಾದ್ನಿಂದ ಸುಮಾರು 100 ಕಿ.ಮೀ. ಉತ್ತರಕ್ಕಿರುವ ಸಮಾರ್ರಾದಲ್ಲಿನ ಉಷ್ಣ ವಿದ್ಯುತ್ ಘಟಕದ ಮೇಲೆ ದಾಳಿ ನಡೆಸಲು ಮೂವರು ಉಗ್ರರು ಗ್ರೆನೇಡ್ ಹಾಗೂ ಸ್ಫೋಟಕ ಪಟ್ಟಿಗಳನ್ನು ಕಟ್ಟಿಕೊಂಡು ಸಂಪೂರ್ಣ ಸನ್ನದ್ದರಾಗಿ ಬಂದಿದ್ದರು.
ಇವರು ಘಟಕವನ್ನು ಪ್ರವೇಶಿಸಿದೊಡನೆಯೇ ಅಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಕಾರ್ಮಿಕರನ್ನು ಗುಂಡಿಕ್ಕಿ ಕೊಂದು 12 ಮಂದಿಯನ್ನು ಗಾಯಗೊಳಿಸಿದರು ಎಂದು ಅಧಿಕಾರಿಯೋರ್ವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್