ಕೂಲಿ ಆಗಿದ್ದಾತ ಅಮೆರಿಕದಲ್ಲಿ ಜಡ್ಜ್; ಕಾಸರಗೋಡಿನ ಸುರೇಂದ್ರನ್‌ ಯಶೋಗಾಥೆ

10ನೇ ತರಗತಿ ಬಳಿಕ ಒಂದು ವರ್ಷ ಶಿಕ್ಷಣ ಸ್ಥಗಿತ

Team Udayavani, Jan 9, 2023, 6:50 AM IST

ಬೀಡಿ ಕಟ್ಟುತ್ತಿದ್ದ ವ್ಯಕ್ತಿ ಈಗ ಅಮೆರಿಕದಲ್ಲಿ ಜಡ್ಜ್!

ಟೆಕ್ಸಾಸ್‌: ಕಡು ಬಡತನದಿಂದಾಗಿ ಒಂದು ಹಂತದಲ್ಲಿ ವಿದ್ಯಾಭ್ಯಾಸ ಸ್ಥಗಿತ ಗೊಳಿಸಿದ್ದ ವ್ಯಕ್ತಿ ಈಗ ಅಮೆರಿಕದ ಟೆಕ್ಸಾಸ್‌ನ ಫೋರ್ಟ್‌ ಬೆಂಡ್‌ ಕೌಂಟಿ ಕೋರ್ಟ್‌ನ ನ್ಯಾಯಾಧೀಶ! ಇಂಥ ಸಾಧನೆ ಮಾಡಿದ್ದು ಕೇರಳದ ಕಾಸರಗೋಡು ಮೂಲದ ಸುರೇಂದ್ರನ್‌ ಕೆ. ಪಟ್ಟೇಲ್‌. ಅವರು 10ನೇ ತರಗತಿಯಲ್ಲಿದ್ದಾಗ ಬಡತನದಿಂದ ವಿದ್ಯಾಭ್ಯಾಸ ಸ್ಥಗಿತಗೊಳಿಸಿದ್ದರು. ಬಳಿಕ ಒಂದು ವರ್ಷ ಬೀಡಿ ಕಟ್ಟುತ್ತ, ಕೂಲಿ ಕೆಲಸ ಮಾಡುತ್ತ ದಿನ ದೂಡಿದ್ದರು. ಅನಂತರ ಗೆಳೆಯರ ಸಹಾಯದಿಂದ ವಿದ್ಯಾಭ್ಯಾಸ ಮುಂದುವರಿಸಿದ್ದರು.

ಈಗ ಟೆಕ್ಸಾಸ್‌ ಜಿಲ್ಲಾ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸುರೇಂದ್ರನ್‌, ಅಮೆರಿಕಕ್ಕೆ ಆಗಮಿ ಸಿದ ಸಂದರ್ಭದಲ್ಲಿ ನನ್ನ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗಿತ್ತು. ಆದರೆ ನಾನು ಡೆಮಾಕ್ರಾಟಿಕ್‌ ಪಕ್ಷದ ಪರ ಪ್ರಚಾರ ನಡೆಸಿದ್ದು ನೆರವಿಗೆ ಬಂತು ಎಂದು ಹೇಳಿದ್ದಾರೆ.

ಸುರೇಂದ್ರನ್‌ ಅವರ ಕುಟುಂಬ ಕಡು ಬಡತನದಲ್ಲಿ ಇದ್ದ ಕಾರಣ ಅವರಿಗೆ ಹತ್ತನೇ ತರಗತಿಯ ವರೆಗೆ ಒಂದು ಹಂತದಲ್ಲಿ ಕಷ್ಟದಿಂದ ಶಿಕ್ಷಣ ಪಡೆಯಲು ಸಾಧ್ಯವಾಗಿತ್ತು. ಅನಂತರ ಒಂದು ವರ್ಷದ ಕಾಲ ಬೀಡಿ ಕಟ್ಟುವುದು, ಕೂಲಿ ಕೆಲಸದ ಮೂಲಕ ಜೀವನ ನಿರ್ವಹಣೆ ಮಾಡಿ, ಕುಟುಂಬದ ನಿರ್ವಹಣೆ ಮಾಡಿದ್ದರು.

ಆ ಬಳಿಕ ಅವರು ನೀಲೇಶ್ವರದ ಇ.ಕೆ. ನಾಯನಾರ್‌ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಪದವಿ ಪಡೆ ಯಲು ಮುಂದಾದರು. ಕೆಲಸ ಹಾಗೂ ಶಿಕ್ಷಣದ ಅನಿ ವಾರ್ಯದಿಂದ ಅವರು ಭಾರೀ ಕಷ್ಟಗಳನ್ನು ಎದುರಿಸ ಬೇಕಾಯಿತು. ಅನಂತರ ಎಲ್‌ಎಲ್‌ಬಿ ಪದವಿಯನ್ನು 1995ರಲ್ಲಿ ಪಡೆದರು. 2007ರ ವರೆಗೆ ಕಾಸರಗೋಡಿನ ಹೊಸದುರ್ಗದಲ್ಲಿ ನ್ಯಾಯವಾದಿಯಾಗಿ ಜನಪ್ರಿಯತೆ ಪಡೆದುಕೊಂಡರು.

ಅದೇ ವರ್ಷ ಅವರ ಪತ್ನಿಗೆ ಅಮೆರಿಕದಲ್ಲಿ ಕೆಲಸ ಸಿಕ್ಕಿದ್ದರಿಂದ ಅವರು ಅಲ್ಲಿಗೆ ತೆರಳಬೇಕಾಯಿತು. ಅಲ್ಲಿ ಯೂನಿವರ್ಸಿಟಿ ಆಫ್ ಹ್ಯೂಸ್ಟನ್‌ನ ಲಾ ಸೆಂಟರ್‌ನಲ್ಲಿ ಎಲ್‌ಎಲ್‌ಎಂ ಪದವಿ ಪಡೆದು, ವಕೀಲಿ ವೃತ್ತಿ ಆರಂಭಿಸಿದರು. ಟೆಕ್ಸಾಸ್‌ನ ಕೋರ್ಟ್‌ನಲ್ಲಿ ಕೆಲಸಕ್ಕೆ ಸೇರಿ ಹಂತಹಂತವಾಗಿ ಮುಂದುವರಿದು ಈಗ ನ್ಯಾಯಮೂರ್ತಿ ಆಗಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.