ಮುಂದಿನ ವರ್ಷ ಸಿರಿಂಜ್ ಕೊರತೆ?
Team Udayavani, Nov 12, 2021, 7:00 AM IST
ಜಿನೇವಾ: ಮುಂದಿನ ವರ್ಷದ ವೇಳೆಗೆ ಜಾಗತಿಕವಾಗಿ 200 ಕೋಟಿಗಳಷ್ಟು ಇಂಜೆಕ್ಷನ್ ಸಿರಿಂಜ್ಗಳ ಕೊರತೆ ತಲೆದೋರುವ ಸಾಧ್ಯತೆಯಿದ್ದು, ವಿವಿಧ ಲಸಿಕೆಗಳನ್ನು ನೀಡುವ ಪ್ರಕ್ರಿಯೆಗೆ ತಡೆಯಾಗುವ ಗಂಭೀರ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಕೋವಿಡ್ -19 ಲಸಿಕೆ ಅಭಿಯಾನಕ್ಕಾಗಿ ವಾಡಿಕೆಗಿಂತ ಹಲವು ಪಟ್ಟು ಹೆಚ್ಚು ಸಿರಿಂಜ್ ಬಳಕೆಯಾಗಿರುವುದೇ ಇದಕ್ಕೆ ಕಾರಣ. ಸಿರಿಂಜ್ ಉತ್ಪಾದನೆ ಹೆಚ್ಚದಿದ್ದರೆ ಕೊರತೆ ಉಂಟಾಗುವುದು ಖಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಕೋವಿಡ್-19 ಲಸಿಕೆ ಡೋಸ್ಗಳು ಹೆಚ್ಚುತ್ತಿರುವ ಪ್ರಮಾಣಕ್ಕೆ ಸರಿಯಾಗಿ ಸಿರಿಂಜ್ ಉತ್ಪಾದನೆ ಕೂಡ ಹೆಚ್ಚಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಸಲಹೆಗಾರ್ತಿ ಲಿಸಾ ಹೆಡ್ಮನ್ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ನ.18ರಂದು ಈ ಶತಮಾನದ ಅತಿದೀರ್ಘಾವಧಿಯ ಭಾಗಶಃ ಚಂದ್ರಗ್ರಹಣ
ಸಿರಿಂಜ್ ಕೊರತೆಯಿಂದಾಗಿ ಅವುಗಳ ಮರುಬಳಕೆಯಂಥ ಅಪಾಯಕಾರಿ ಪ್ರಯೋಗವೂ ನಡೆಯುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ