ಭಾರತ ‘ಸುಂಕಗಳ ರಾಜ’ : ಟ್ರಂಪ್ ಆಕ್ರೋಶ
Team Udayavani, Oct 3, 2018, 8:10 AM IST
ವಾಷಿಂಗ್ಟನ್ : ಭಾರತವನ್ನು ‘ಸುಂಕಗಳ ರಾಜ’ (ಟ್ಯಾರಿಫ್ ಕಿಂಗ್) ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದ್ದಾಗಿ ಹೇಳಿದ್ದಾರೆ. ಜತೆಗೆ ತಮ್ಮನ್ನು ಸಂತೋಷ ಗೊಳಿಸಲು ಕ್ಷಿಪ್ರವಾಗಿ ಸಮಗ್ರ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಲು ಭಾರತ ಉತ್ಸುಕ ವಾಗಿದೆ ಎಂದು ಹೇಳಿದ್ದಾರೆ. ಸೋಮವಾರ ಕೆನಡಾ ಮತ್ತು ಮೆಕ್ಸಿಕೋ ಜತೆ ವ್ಯಾಪಾರ ಒಪ್ಪಂದಕ್ಕೆ ವಾಷಿಂಗ್ಟನ್‌ನಲ್ಲಿ ಸಹಿ ಹಾಕಿದ ಬಳಿಕ ಅವರು ಮಾತನಾಡುವ ವೇಳೆ ಈ ಅಂಶ ಪ್ರಸ್ತಾವ ಮಾಡಿದ್ದಾರೆ. ಭಾರತ ಅಮೆರಿಕದ ವಸ್ತುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸುಂಕ ವಿಧಿಸುತ್ತಿದೆ ಎಂಬ ಆರೋಪವನ್ನು ಟ್ರಂಪ್ 2ನೇ ಬಾರಿಗೆ ಮಾಡುತ್ತಿದ್ದಾರೆ.
‘ಅಮೆರಿಕದ ಹರ್ಲೆ ಡೇವಿಡ್‌ಸನ್ ಮೋಟರ್ ಸೈಕಲ್ ಸೇರಿದಂತೆ ವಿವಿಧ ವಸ್ತುಗಳಿಗೆ ಭಾರತ ಸರಕಾರ ಹೆಚ್ಚಿನ ಪ್ರಮಾಣದಲ್ಲಿ ಸುಂಕ ವಿಧಿಸುತ್ತಿದೆ. ಹೀಗಾಗಿ ಅದು ‘ಸುಂಕಗಳ ರಾಜ’. ನನ್ನನ್ನು ಸಂತೋಷಪಡಿಸುವ ದೃಷ್ಟಿಯಿಂದ ಭಾರತ ಶೀಘ್ರವೇ ಸಮಗ್ರ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿದೆ’ ಎಂದು ಹೇಳಿದ್ದಾರೆ. ಸುಂಕ ವಿಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆ ಈಗಾಗಲೇ ಚರ್ಚೆ ನಡೆಸಿದ್ದಾಗಿಯೂ ವಿವರಿಸಿದ್ದಾರೆ. ಈ ಸಂದರ್ಭದಲ್ಲಿ ಅದನ್ನು ತಗ್ಗಿಸುವ ವಾಗ್ಧಾನವನ್ನು ಮೋದಿ ನೀಡಿದ್ದಾರೆ ಎಂದರು. ಅಮೆರಿಕ ಹಿಂದಿನ ಸರಕಾರಗಳ ಅವಧಿಯಲ್ಲಿ ಈ ಬಗ್ಗೆ ಭಾರತದ ಜತೆ ಯಾರೂ ಮಾತನಾಡಿಲ್ಲ ಎಂದು ಟೀಕಿಸಿದ್ದಾರೆ. ಇದರ ಹೊರತಾಗಿಯೂ ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯ ಅತ್ಯಂತ ಉತ್ತಮವಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!