ತಾಪಮಾನ ಹೆಚ್ಚಳಕ್ಕೆ ಶಾಸ್ತಿ

2030ರ ವೇಳೆಗೆ ಭಾರತಕ್ಕೆ ಶೇ.5.8 ಕೆಲಸದ ಅವಧಿ ನಷ್ಟ

Team Udayavani, Jul 3, 2019, 5:00 AM IST

ಸಾಂದರ್ಭಿಕ ಚಿತ್ರ

ವಿಶ್ವಸಂಸ್ಥೆ: ಜಾಗತಿಕ ತಾಪಮಾನವು ನಾವು-ನೀವು ಮಾಡುವ ಕೆಲಸದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು. ತಾಪಮಾನ ಏರಿಕೆಯಿಂದಾಗಿ 2030ರ ವೇಳೆಗೆ ಭಾರತವು ಶೇ.5.8ರಷ್ಟು ಕೆಲಸದ ಅವಧಿಯನ್ನು ಕಳೆದುಕೊಳ್ಳಲಿದೆ. ಅಂದರೆ 3.40 ಕೋಟಿ ಪೂರ್ಣಪ್ರಮಾಣದ ಉದ್ಯೋಗಕ್ಕೆ ಸಮನಾದ ಉತ್ಪಾದಕತೆಯ ನಷ್ಟವನ್ನು ದೇಶ ಅನುಭವಿಸಲಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ.

“ಬಿಸಿ ತಾಪಮಾನದಲ್ಲಿ ಕೆಲಸ- ಕಾರ್ಮಿಕರ ಉತ್ಪಾದಕತೆ ಮತ್ತು ಶಿಸ್ತಿನ ಕೆಲಸದ ಮೇಲೆ ಉಷ್ಣತೆಯಿಂದಾಗಿ ಉಂಟಾಗುವ ಒತ್ತಡದ ಪರಿಣಾಮ’ ಎಂಬ ವರದಿಯನ್ನು ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಮಂಗಳವಾರ ಬಿಡುಗಡೆ ಮಾಡಿದೆ.

ಅದರ ಪ್ರಕಾರ, ಅತಿಯಾದ ತಾಪಮಾನ ದಿಂದಾಗಿ ಉದ್ಯೋಗಿಗಳಿಗೆ ಕೆಲಸ ಮಾಡು ವುದೇ ಅಸಾಧ್ಯ ಎಂಬಂಥ ಸ್ಥಿತಿ ನಿರ್ಮಾಣ ವಾಗಲಿದೆ ಅಥವಾ ಉದ್ಯೋಗಿಗಳು ನಿಧಾನಗತಿಯಲ್ಲಿ ಕೆಲಸ ಮಾಡಬೇಕಾಗಿ ಬರಲಿದೆ. ಹೀಗಾಗಿ, ಪ್ರತಿ ವರ್ಷ ಜಗತ್ತಿನಲ್ಲಿ ಒಟ್ಟಾರೆ ಕೆಲಸದ ಅವಧಿಯ ಶೇ.2ಕ್ಕಿಂತಲೂ ಹೆಚ್ಚು ಸಮಯವು ನಷ್ಟವಾಗಿ ಹೋಗಲಿದೆ ಎಂದು ಹೇಳಲಾಗಿದೆ.

ತಾಪಮಾನದ ಒತ್ತಡದಿಂದ 2030ರ ವೇಳೆ ಜಗತ್ತಿಗೆ ಸುಮಾರು 2,400 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಲಿದೆ. ಈ ಶತಮಾನದ ಅಂತ್ಯದ ವೇಳೆಗೆ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಾ ಸಾಗುವ ಕಾರಣ, ಈ ಕೂಡಲೇ ಹವಾಮಾನ ವೈಪರೀತ್ಯಕ್ಕೆ ಕಡಿವಾಣ ಹಾಕದೇ ಹೋದರೆ, ಈ ಮೊತ್ತವು ಇನ್ನಷ್ಟು ಏರಿಕೆ ಕಾಣಲಿದೆ ಎಂದೂ ವರದಿ ಎಚ್ಚರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...