ಸಾವಿನ ರಿಂಗಣ ಈಗ ಯು.ಕೆ.ಯಲ್ಲೇ ಹೆಚ್ಚು
Team Udayavani, May 7, 2020, 6:30 AM IST
ಕೋವಿಡ್ -19ದಿಂದ ತತ್ತರಿಸಿರುವ ಯುನೈಟೆಡ್ ಕಿಂಗ್ಡಮ್ (ಯು.ಕೆ.)ನಲ್ಲಿ ಈಗ ಸಾವಿನ ಸಂಖ್ಯೆ ಅತ್ಯಧಿಕವಾಗಿದೆ. ಹೀಗಾಗಿ, ಐರೋಪ್ಯ ಒಕ್ಕೂಟದ ರಾಷ್ಟ್ರಗಳ ಪೈಕಿ ಅತ್ಯಂತ ಹೆಚ್ಚು ಸಾವು ಕಂಡ ದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ಬುಧವಾರ ಈ ಬಗ್ಗೆ ಮಾತನಾಡಿರುವ ವಿದೇಶಾಂಗ ಸಚಿವ ಡೊಮಿನಿಕ್ ರಾಬ್, “ಕೋವಿಡ್ -19 ಸೋಂಕು ಪತ್ತೆಯಾದಾಗಿನಿಂದ ಇಲ್ಲಿಯವರೆಗೆ ಯು.ಕೆ.ಯಲ್ಲಿ 29 ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಇದು ಕೋವಿಡ್ -19ದಿಂದ ತೀವ್ರ ಬಾಧೆಗೊಳಗಾಗಿರುವ ಐರೋಪ್ಯ ಒಕ್ಕೂಟದ ಮತ್ತೂಂದು ರಾಷ್ಟ್ರವಾದ ಇಟಲಿಗಿಂತ ಹೆಚ್ಚು. ಮಂಗಳವಾರ-ಬುಧವಾರ ಅವಧಿಯಲ್ಲಿ ಅಂದಾಜು 700ಕ್ಕೂ ಹೆಚ್ಚು ಸಾವುಗಳು ಯು.ಕೆ.ಯಲ್ಲಿ ಸಂಭವಿಸಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ಆತಂಕಕಾರಿಯಾಗಿಸಿವೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಬೋರಿಸ್ ಜಾನ್ಸನ್ ಸಂಸತ್ನಲ್ಲಿ ಮಾತನಾಡಿ ಸೋಮವಾರದಿಂದ ಕಠಿನ ಲಾಕ್ಡೌನ್ ನಿಯಮಗಳನ್ನು ಸಡಿಲಿಸುವುದಾಗಿ ಹೇಳಿದ್ದಾರೆ.
ದೇಶದಲ್ಲಿ ಉಂಟಾಗಿರುವ ಸಾವು ನೋವು ಆಘಾತ ತಂದಿದೆ ಎಂದು ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಗುರುವಾರ ಅವರು ಯುನೈಟೆಡ್ ಕಿಂಗ್ಡಮ್ನ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಹಲವು ಪರಿಹಾರಾತ್ಮಕ ಕ್ರಮಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ