ತೈಲ ಸಂಗ್ರಹಿಸಲು ಬಂದು 150 ಮಂದಿ ಸುಟ್ಟು ಭಸ್ಮ

Team Udayavani, Jun 26, 2017, 3:45 AM IST

oil.jpg

ಲಾಹೋರ್‌: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಭಾವಲ್ಪುರದಲ್ಲಿ ತೈಲ ತುಂಬಿದ ಟ್ಯಾಂಕರ್‌ ಪಲ್ಟಿಯಾಗಿ, ಸ್ಫೋಟಗೊಂಡು ಉರಿದ ಕಾರಣ ಕನಿಷ್ಠ 150 ಮಂದಿ ಅಸುನೀಗಿದ್ದಾರೆ. ಈ ಘಟನೆಯಲ್ಲಿ 117 ಮಂದಿ ಗಾಯಗೊಂಡಿದ್ದಾರೆ.

ಇದನ್ನು ಪಾಕ್‌ ಇತಿಹಾಸದಲ್ಲೇ ಅತಿ ಭೀಕರ ದುರಂತ ಎಂದು ಬಣ್ಣಿಸಲಾಗಿದೆ. ಅವರನ್ನೆಲ್ಲ ವಿವಿಧ ಆಸ್ಪತ್ರೆಗಳಿಗೆ
ದಾಖಲಿಸಲಾಗಿದೆ. ಟ್ಯಾಂಕರ್‌ ಪಲ್ಟಿಯಾಗಿದೆ ಎಂದು ತಿಳಿದು ತೈಲ ಸಂಗ್ರಹಿಸಿಕೊಳ್ಳಲು ಬಂದ ನೂರಾರು ಮಂದಿ
ಸ್ಥಳೀಯರು ಬೆಂಕಿಗೆ ಆಹುತಿಯಾಗಿದ್ದಾರೆ.

ಜತೆಗೆ ಸ್ಥಳದಲ್ಲೇ ಇದ್ದ ಹಲವು ವಾಹನಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ರಂಜಾನ್‌ ವೇಳೆಯಲ್ಲಿ ಈ ದುರಂತ ಸಂಭವಿಸಿದ್ದು, ಪಾಕಿಸ್ತಾನ ಪ್ರಧಾನಿ ನವಾಜ್‌ ಷರೀಫ್ ಅವರು ಇದನ್ನು “ರಾಷ್ಟ್ರೀಯ ದುರಂತ’ ಎಂದು ಘೋಷಿಸಿದ್ದಾರೆ.

ಆಗಿದ್ದೇನು?: ಕರಾಚಿಯಿಂದ ಲಾಹೋರ್‌ಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಪಂಜಾಬ್‌ ಪ್ರಾಂತ್ಯದ ಭಾವಲ್ಪುರದ ಅಹ್ಮದ್‌ಪುರ ಪೂರ್ವದಲ್ಲಿ ಟೈರ್‌ ಸ್ಫೋಟಗೊಂಡು ಪಲ್ಟಿಯಾಯಿತು. ಅದೇ ಸಂದರ್ಭದಲ್ಲಿ ಟ್ಯಾಂಕರ್‌ನಲ್ಲಿದ್ದ ತೈಲ ನೆಲಕ್ಕೆ ಚೆಲ್ಲತೊಡಗಿತು. ಸ್ಥಳೀಯರು ಕುತೂಹಲದಿಂದ ಅಲ್ಲಿಗೆ ಓಡೋಡಿ ಬಂದು ರಕ್ಷಣಾ ಕಾರ್ಯಕ್ಕೂ ನೆರವಾದರು.

ಅವರ ನಡುವೆಯೇ ವ್ಯರ್ಥವಾಗುತ್ತಿರುವ ತೈಲವನ್ನು ಏಕೆ ಸಂಗ್ರಹಿಸಬಾರದು ಎಂದು ಅದಕ್ಕೂ ಮುಂದಾದರು. ಹಲವರು ತೈಲ ಸಂಗ್ರಹದಲ್ಲಿ ನಿರತರಾದರು. ಅದೇ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಸಿಗರೇಟು ಸೇದಿ ಅದನ್ನು ತೈಲದ ಮೇಲೆ ಹಾಕಿದ. ಕೂಡಲೇ ಬೆಂಕಿಯ ಕೆನ್ನಾಲಿಗೆ ಎಲ್ಲೆಡೆ ವ್ಯಾಪಿಸಿತು. ನೋಡ ನೋಡುತ್ತಿದ್ದಂತೆಯೇ ಘಟನಾ ಸ್ಥಳದಲ್ಲಿ ಸೇರಿದ್ದ ಜನರ ಪೈಕಿ 150 ಮಂದಿ ಸುಟ್ಟು ಕರಕಲಾಗಿ ಹೋದರು. 117ಕ್ಕೂ ಹೆಚ್ಚು ಮಂದಿ ಗಾಯಗೊಂಡರು.

ಭಾವಲ್ಪುರ ಜಿಲ್ಲಾಡಳಿತ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ರಾಣಾ ಸಲೀಮ್‌ ಮಾತನಾಡಿ, ಈ ಘಟನೆ
ಪಾಕಿಸ್ತಾನದ ಇತಿಹಾಸದಲ್ಲೇ ಅತ್ಯಂತ ಬೀಭತ್ಸ ಘಟನೆ ಎಂದು ಹೇಳಿದ್ದಾರೆ. ವೈದ್ಯಕೀಯ ನೆರವು ಸಿಗುವುದಕ್ಕಿಂತ
ಮೊದಲೇ 123 ಮಂದಿ ಸಾವಿಗೀಡಾಗಿದ್ದಾರೆ. ಗಾಯಾಳುಗಳ ಪೈಕಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿಯೇ ಇದೆ. ಟ್ಯಾಂಕರ್‌ನಿಂದ ಸುಮಾರು 50 ಸಾವಿರ ಲೀಟರ್‌ಗಳಷ್ಟು ತೈಲ ಸೋರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತ್ಯಕ್ಷದರ್ಶಿ ಮೊಹಮ್ಮದ್‌ ಹನೀಫ್ ಎಂಬುವರು ಮಾಧ್ಯಮ ಪ್ರತಿನಿಧಿಗಳಿಗೆ ಆಸ್ಪತ್ರೆಯಲ್ಲಿ ಹೇಳಿದ ಪ್ರಕಾರ,
“ಉಚಿತವಾಗಿ ತೈಲ ನೀಡಲಾಗುತ್ತದೆ ಎಂದು ಸೋದರ ಸಂಬಂಧಿ ಕರೆದ. ಬಾಟಲಿಗಳನ್ನು ತೆಗೆದುಕೊಂಡು
ಮನೆಯಿಂದ ಹೊರಕ್ಕೆ ಬರುವ ವೇಳೆಯಲ್ಲಿ ಹಲವಾರು ಮಂದಿ ಹೆದ್ದಾರಿಯತ್ತ ಓಡುತ್ತಿದ್ದರು. ನಾನೂ ಅವರ ಜತೆ
ಸೇರಿಕೊಂಡೆ. ಅದೇ ಸಂದರ್ಭದಲ್ಲಿ ಟ್ಯಾಂಕರ್‌ ಭಾರಿ ಪ್ರಮಾಣದಲ್ಲಿ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿತು. ಅದರ ಹತ್ತಿರ ಇದ್ದವರು ಸುಟ್ಟು ಕರಕಲಾಗಿ ಹೋದರು’ ಎಂದಿದ್ದಾರೆ.

ವಾಹನಗಳು ಭಸ್ಮ: ಸ್ಫೋಟದಿಂದ ಉಂಟಾದ ಬೆಂಕಿಯ ಕೆನ್ನಾಲಿಗೆಗೆ ಬೈಕ್‌ಗಳು, ಕಾರುಗಳು ಸೇರಿದಂತೆ ಹಲವು
ವಾಹನಗಳು ಆಹುತಿಯಾಗಿವೆ. ಪಂಜಾಬ್‌ ಪ್ರಾಂತ್ಯದ ಮುಖ್ಯಮಂತ್ರಿ ಶಭಾಜ್‌ ಷರೀಫ್ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ನವಾಜ್‌ ಷರೀಫ್, ರಾಷ್ಟ್ರಪತಿ ಮಮೂ°ನ್‌ ಹುಸೇನ್‌, ಪಾಕಿಸ್ತಾನ ತೆಹ್ರಿಕ್‌-ಇ- ಇನ್ಸಾಫ್ ಮುಖ್ಯಸ್ಥ ಇಮ್ರಾನ್‌ ಖಾನ್‌, ಪಾಕಿಸ್ತಾನ ಪೀಪಲ್ಸ್‌ ಪಾರ್ಟಿಯ ಬಿಲಾವಲ್‌ ಭುಟ್ಟೋ, ಸೇನಾ ಮುಖ್ಯಸ್ಥ ಜನರಲ್‌ ಖಮರ್‌ ಜಾವೇದ್‌ ಬಾಜ್ವಾ ಶೋಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.