ಖಾನ್ ಪ್ರಮಾಣಕ್ಕೆ ಪ್ರಧಾನಿಗೆ ಆಹ್ವಾನವಿಲ್ಲ
Team Udayavani, Aug 1, 2018, 10:27 AM IST
ಇಸ್ಲಾಮಾಬಾದ್: ಪಾಕಿಸ್ಥಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆ.11ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾರ್ಕ್ ದೇಶದ ನಾಯಕರನ್ನು ಆಹ್ವಾನಿಸುವ ಪ್ರಸ್ತಾವ ಇಲ್ಲ. ಈ ಬಗೆಗಿನ ಮಾಧ್ಯಮಗಳ ವರದಿಗಳು ಸರಿಯಲ್ಲ ಎಂದು ಪಾಕಿಸ್ಥಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಕ್ತಾರ ಫವಾದ್ ಚೌಧರಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಪಾಕಿಸ್ಥಾನದ ವಿದೇಶಾಂಗ ವ್ಯವಹಾರ ಸಚಿವಾಲಯದ ಜತೆ ಚರ್ಚಿಸಿದ ಬಳಿಕವೇ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಚೌಧರಿ ಸ್ಪಷ್ಟನೆ ನೀಡಿದ್ದಾರೆ. ಸಾರ್ಕ್ ನಾಯಕರನ್ನು ಆಹ್ವಾನಿಸುವ ಬಗ್ಗೆ ವಿದೇಶಾಂಗ ಇಲಾಖೆಯ ಸಲಹೆಯನ್ನಷ್ಟೇ ಕೇಳಿದ್ದೇವೆ ಎಂದು ಚೌಧರಿ ಬರೆದುಕೊಂಡಿದ್ದಾರೆ.
ಇದಕ್ಕೂ ಮೊದಲು ಮಂಗಳವಾರ ನಡೆದಿದ್ದ ಬೆಳವಣಿಗೆಯಲ್ಲಿ ಆ.11ರ ಕಾರ್ಯಕ್ರಮಕ್ಕೆ ಪಿಎಂ ಮೋದಿ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ