“ವಿಶ್ವದ ಸುಂದರ ಮಹಿಳಾ ಪೊಲೀಸ್ ಅಧಿಕಾರಿ’
Team Udayavani, Nov 12, 2022, 7:25 AM IST
ಬೊಗೊಟಾ: ದಕ್ಷಿಣ ಅಮೆರಿಕದ ಕೊಲೊಂಬಿಯಾದ ಮೆಡಲಿನ್ನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ.
ಆಕೆಯನ್ನು “ವಿಶ್ವದ ಅತ್ಯಂತ ಸುಂದರ ಮಹಿಳಾ ಪೊಲೀಸ್ ಅಧಿಕಾರಿ’ ಎಂದು ಕರೆಯಲಾಗುತ್ತಿದೆ. ಡಯಾನಾ ರಮಿರೇಜ್ ಈ ಸುಂದರಿಯಾಗಿದ್ದು, ಇನ್ಸ್ಸ್ಟಾಗ್ರಾಂನಲ್ಲಿ ಸುಮಾರು 4 ಲಕ್ಷ ಫಾಲೋವರ್ಗಳನ್ನು ಹೊಂದಿದ್ದಾರೆ.
ಪೊಲೀಸ್ ಅಧಿಕಾರಿಯಾಗಿರುವ ಈಕೆ, ವಿಶ್ವದ ಅತ್ಯಂತ ಅಪಾಯಕಾರಿ ನಗರಗಳಲ್ಲಿ ಒಂದಾಗಿದ್ದ ಮೆಡಲಿನ್ ನಗರದಲ್ಲಿ ಪ್ರತಿ ನಿತ್ಯ ಗಸ್ತು ತಿರುಗುತ್ತಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಡಯಾನಾ, “ಮಾಡೆಲ್ ಆಗಲು ಪೊಲೀಸ್ ಉದ್ಯೋಗವನ್ನು ಬಿಡುವುದಿಲ್ಲ. ಪೊಲೀಸ್ ಅಧಿಕಾರಿಯಾಗಿರುವ ಬಗ್ಗೆ ನನಗೆ ಹೆಮ್ಮೆ ಇದೆ,’ ಎಂದಿದ್ದಾರೆ.
ಕೊಲೊಂಬಿಯಾದ ಇನ್ಸಾಫೆಸ್ಟ್ ಪ್ರಶಸ್ತಿ ಸಮಾರಂಭದಲ್ಲಿ ಡಯಾನಾ ಅವರನ್ನು “ವರ್ಷದ ಅತ್ಯುತ್ತಮ ಪೊಲೀಸ್ ಅಧಿಕಾರಿ ಅಥವಾ ಮಿಲಿಟರಿ ಪ್ರಭಾವಿ ವ್ಯಕ್ತಿ’ ಎಂಬ ಪ್ರಶಸ್ತಿಗೆ ನಾಮಾಂಕಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ