ದೇಶದ್ರೋಹದ ಆರೋಪ: ಸೌದಿಯ ಮೂವರು ರಾಜಕುಮಾರರ ಬಂಧನ
Team Udayavani, Mar 7, 2020, 10:06 AM IST
ಅಧಿಕಾರದಲ್ಲಿರುವ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್
ರಿಯಾದ್: ದೇಶದ್ರೋಹದ ಆರೋಪದ ಮೇರೆಗೆ ಸೌದಿ ಅರೇಬಿಯಾದ ಮೂವರು ರಾಜಕುಮಾರರನ್ನು ಸೌದಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಸೌದಿಯ ಅಧಿಕಾರದಲ್ಲಿರುವ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಆಡಳಿತದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಸಿದ್ದಾರೆ ಎಂದು ವರದಿಯಾಗಿದೆ.
ರಾಜಕುಮಾರ ಅಹಮದ್ ಬಿನ್ ಅಬ್ದುಲ್ ಅಜಿಜ್ ಅಲ್ ಸೌದ್, ಆತನ ಸಹೋದರ ಕಿಂಗ್ ಸಲ್ಮಾನ್ ಮತ್ತು ಮೊಹಮ್ಮದ್ ಬಿನ್ ನಾಯೆಫ್ ರನ್ನು ಶುಕ್ರವಾರ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ ಎಂದು ವಾಲ್ ಸ್ಟ್ರಿಟ್ ಜರ್ನಲ್ ವರದಿ ಮಾಡಿದೆ.
ದಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಕೂಡಾ ಈ ಬಗ್ಗೆ ವರದಿ ಮಾಡಿದ್ದು, ಈ ಮೂವರೊಂದಿಗೆ ಪ್ರಿನ್ಸ್ ನಾಯೆಫ್ ರೊಂದಿಗೆ ಅವರ ಕಿರಿಯ ಸಹೋದರ ಪ್ರಿನ್ಸ್ ನವಾಫ್ ಬಿನ್ ನಯೇಫ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದಿದೆ.
ಆದರೆ ಸೌದಿ ಅರೇಬಿಯಾ ಅಧಿಕಾರಿಗಳು ಈ ವಿಷಯದ ಬಗ್ಗೆ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ