ಭಾರತಕ್ಕೆ ಸಬ್ಸಿಡಿ ನಿಲ್ಲಿಸಲು ಚಿಂತನೆ

Team Udayavani, Sep 9, 2018, 6:00 AM IST

ಷಿಕಾಗೋ: ಭಾರತ, ಚೀನಾದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ನೀಡುತ್ತಿರುವ ಸಬ್ಸಿಡಿಯನ್ನು ನಿಲ್ಲಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆ ಹಾಕಿದ್ದಾರೆ. ಒಂದೆಡೆ ವ್ಯಾಪಾರ ವಹಿವಾಟುಗಳ ಮೇಲೆ ಭಾರಿ ಸುಂಕ ಹೇರುವ ನಿರ್ಧಾರ ಕೈಗೊಂಡಿರುವ ಟ್ರಂಪ್‌, ವಿದೇಶಗಳಿಗೆ ಅಮೆರಿಕ ನೀಡುತ್ತಿರುವ ವಿವಿಧ ರೀತಿಯ ಸಬ್ಸಿಡಿಗಳನ್ನೂ ನಿಲ್ಲಿಸಲು ನಿರ್ಧರಿಸಿದ್ದಾರೆ.

ಈ ದೇಶಗಳು ಅಭಿವೃದ್ಧಿಗೊಳ್ಳುತ್ತಿರುವ ದೇಶಗಳು ಎಂಬ ಪಟ್ಟಿಯಲ್ಲಿ ಸೇರಿಕೊಂಡಿದ್ದು, ಸಬ್ಸಿಡಿಗಳನ್ನು ಪಡೆಯುತ್ತಿವೆ. ಅಮೆರಿಕ ಈ ದೇಶಗಳಿಗೆ ಹಣ ನೀಡುತ್ತಿದೆ. ಇದು ಅತ್ಯಂತ ಅಚ್ಚರಿಯ ಸಂಗತಿಯಾಗಿದೆ. ಆದರೆ ನಾನು ಇದನ್ನು ನಿಲ್ಲಿಸುತ್ತೇನೆ ಎಂದು ಟ್ರಂಪ್‌ ಕಿಡಿಕಾರಿದ್ದಾರೆ. ಅಮೆರಿಕ ಕೂಡ ಅಭಿವೃದ್ಧಿಗೊಳ್ಳುತ್ತಿರುವ ದೇಶ. ಇತರ ಎಲ್ಲ ದೇಶಗಳಿಗಿಂತ ಹೆಚ್ಚು ವೇಗದಲ್ಲಿ ಅಮೆರಿಕ ಅಭಿವೃದ್ಧಿಗೊಳ್ಳುತ್ತಿದೆ. ಚೀನಾ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುವುದಕ್ಕೆ ವಿಶ್ವ ವ್ಯಾಪಾರ ಸಂಘಟನೆಯೇ ಬೆಂಬಲ ನೀಡಿದೆ ಎಂದು ಟ್ರಂಪ್‌ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ