ಪಾಕ್ ಅಧ್ಯಕ್ಷ ಅಲ್ವಿಗೆ ಟ್ವೀಟರ್ ನೋಟಿಸ್ ಜಾರಿ ಮಾಡಿದ್ದೇಕೆ? ಟ್ವೀಟರ್ ವಿರುದ್ಧ ಪಾಕ್ ಕಿಡಿ
Team Udayavani, Aug 26, 2019, 5:07 PM IST
ವಾಷಿಂಗ್ಟನ್: ಕೇಂದ್ರ ಸರಕಾರ ಇತ್ತೀಚೆಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಕಾಶ್ಮೀರದ ಪರಿಸ್ಥಿತಿಗೆ ಸಂಬಂಧಿಸಿದಂತೆ ಸುಳ್ಳು ಹಾಗೂ ಪ್ರಚೋದನಕಾರಿ ಟ್ವೀಟ್ ಮಾಡಿದ್ದ ಪಾಕಿಸ್ತಾನದ ಅಧ್ಯಕ್ಷ ಅರೀಫ್ ಅಲ್ವಿಗೆ ಟ್ವೀಟರ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟ ಸೇರಿದಂತೆ ಎಲ್ಲಾ ವಿಧದಲ್ಲಿಯೂ ತನ್ನ ಅಸಹನೆಯನ್ನು ವ್ಯಕ್ತಪಡಿಸಿತ್ತು.
ಆಗಸ್ಟ್ 24ರಂದು ಅಲ್ವಿ, 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು-ಕಾಶ್ಮಿರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂಬ ಅರ್ಥದ ವೀಡಿಯೋವನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ಸುಳ್ಳು ಸುದ್ದಿ ಹರಡಿದ್ದರು. ಈ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಆಲ್ವಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ಬಂದಿರುವುದಾಗಿ ಟ್ವೀಟರ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ