ಇಬ್ಬರು ಭಾರತೀಯರಿಗೆ ಕೋವಿಡ್‌-19 ಸೋಂಕು ದೃಢ

ಟೋಕಿಯೋದಲ್ಲಿ ರಾಯಭಾರ ಕಚೇರಿ ಸ್ಪಷ್ಟನೆ

Team Udayavani, Feb 13, 2020, 1:05 AM IST

Coronavirus-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಟೋಕಿಯೊ/ಬೀಜಿಂಗ್‌: ಕೋವಿಡ್‌-19 ವೈರಸ್‌ (ಕೊರೊನಾ ವೈರಸ್‌) ಭೀತಿ ಹಿನ್ನೆಲೆಯಲ್ಲಿ ಸಮುದ್ರ ಮಧ್ಯದಲ್ಲಿಯೇ ಲಂಗರು ಹಾಕಿರುವ ಜಪಾನ್‌ನ ವಿಲಾಸಿ ನೌಕೆಯಲ್ಲಿರುವ ಇಬ್ಬರು ಭಾರತೀಯರಿಗೆ ಸೋಂಕು ತಗುಲಿರುವುದು ದೃಢ ವಾಗಿದೆ. ಈ ಅಂಶವನ್ನು ಟೋಕಿಯೋದಲ್ಲಿರುವ ಭಾರತದ ರಾಯಭಾರ ಕಚೇರಿ ದೃಢಪಡಿಸಿದೆ. ಅವರನ್ನು ಇನ್ನು 14 ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಲಾಗುತ್ತದೆ. ಅವರನ್ನು ತಜ್ಞ ವೈದ್ಯರು ಪರೀಕ್ಷೆ ನಡೆಸಿದ್ದಾರೆ.

ಪಶ್ಚಿಮ ಬಂಗಾಲದ ವಿನಯ ಕುಮಾರ್‌ ಸರ್ಕಾರ್‌ ಎಂಬವರು ಈಗಾಗಲೇ ವೀಡಿಯೋ ಸಂದೇಶ ಕಳುಹಿಸಿ, ತಮ್ಮನ್ನು ಪಾರು ಮಾಡಬೇಕೆಂದು ಈಗಾಗಲೇ ಮನವಿ ಮಾಡಿದ್ದಾರೆ. ಅದರಲ್ಲಿ ಒಟ್ಟು 138 ಭಾರತೀಯರು ಸೇರಿದಂತೆ 3,711 ಮಂದಿ ಇದ್ದಾರೆ. ವೈರಸ್‌ ಹಿನ್ನೆಲೆಯಲ್ಲಿ ಫೆ.19ರ ವರೆಗೆ ಸಮುದ್ರದಲ್ಲಿಯೇ ಇರಬೇಕಾಗಿದೆ.

ಇನ್ನೂ 39 ಮಂದಿಗೆ: ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಸಮುದ್ರದ ಮಧ್ಯದಲ್ಲಿಯೇ ತಡೆಹಿಡಿ ಯಲ್ಪಟ್ಟಿರುವ ಜಪಾನ್‌ನ ವಿಲಾಸಿ ನೌಕೆ ಡೈಮಂಡ್‌ ಪ್ರಿನ್ಸೆಸ್‌ನಲ್ಲಿ ಇನ್ನೂ 39 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ, ಪೀಡಿತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ.

ಏರಿದ ಸಂಖ್ಯೆ: ಸದ್ಯ ವಿಶ್ವವ್ಯಾಪಿಯಾಗಿರುವ ಕೊರೊನಾ ವೈರಸ್‌ಗೆ ಅಸುನೀಗಿರುವವರ ಸಂಖ್ಯೆ 1,113ಕ್ಕೆ ಏರಿಕೆಯಾಗಿದೆ. ಅತ್ಯಂತ ಹೆಚ್ಚು ವೈರಸ್‌ನಿಂದ ಪೀಡಿತವಾಗಿರುವ ಹ್ಯುಬೆ ಪ್ರಾಂತ್ಯದಲ್ಲಿಯೇ 97 ಮಂದಿ ಹೊಸ ಸಾವಿನ ಸಂಖ್ಯೆ ವರದಿಯಾಗಿದೆ. ಇದಲ್ಲದೆ ಸೋಂಕು ಪೀಡಿತರ ಸಂಖ್ಯೆ 44,653ಕ್ಕೆ ಏರಿಕೆಯಾಗಿದೆ.

ಹೊಸ ಹೆಸರು: ಕೊರೊನಾ ವೈರಸ್‌ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ)  ಕೋವಿಡ್‌-19 (Covid 19) ಎಂದು ಹೆಸರಿಸಲು ನಿರ್ಧರಿಸಿದೆ. ಅದರಲ್ಲಿ ವಿಶ್ವದ ಯಾವುದೇ ಭೂಭಾಗ, ಪ್ರಾಣಿಯ ಹೆಸರನ್ನು ಸೇರಿಸಲಾಗಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಹೊಸ ಹೆಸರನ್ನು ಕೊರೊನಾ (Corona), ವೈರಸ್‌ (Virus), ಡಿಸೀಸ್‌ (disease)ನ ಒಂದೊಂದು ಹೆಸರುಗಳನ್ನು ತೆಗೆದುಕೊಳ್ಳಲಾಗಿದೆ. 2019ನೇ ಇಸ್ವಿಯಲ್ಲಿ ಅದು ಪತ್ತೆಯಾಗಿದ್ದರಿಂದ “19′ ಎಂದು ಸಂಖ್ಯೆಯನ್ನು ಇರಿಸಿಕೊಳ್ಳಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.

ಪುಟಿದೆದ್ದ ಷೇರು ಮಾರುಕಟ್ಟೆ: ಬಾಂಬೆ ಷೇರು ಪೇಟೆ ಸೇರಿದಂತೆ ವಿಶ್ವದ ಹೆಚ್ಚಿನ ಷೇರು ಮಾರುಕಟ್ಟೆಗಳಲ್ಲಿ ಕೊರೊನಾ ವೈರಸ್‌ ಭೀತಿ ತಗ್ಗಿರುವ ಹಿನ್ನೆಲೆಯಲ್ಲಿ ವಹಿವಾಟು ತೇಜಿ ಯಿಂದಲೇ ನಡೆದಿದೆ. ಬುಧವಾರ ಬಿಎಸ್‌ಇ ಸೂಚ್ಯಂಕ 350 ಪಾಯಿಂಟ್‌ಗಳಷ್ಟು ಜಿಗಿದಿದೆ. ವಹಿವಾಟು ಮುಕ್ತಾಯದ ವೇಳೆಗೆ ಸೂಚ್ಯಂಕ 41, 565.90ರಲ್ಲಿ ಮುಕ್ತಾಯಗೊಂಡಿತು. ನಿಫ್ಟಿ ಸೂಚ್ಯಂಕ 93.30 ಜಿಗಿದು 12,201.20ರಲ್ಲಿ ಮುಕ್ತಾಯವಾಯಿತು.

ಹಾಂಕಾಂಗ್‌, ಶಾಂಘೈ, ಟೋಕಿಯೋ, ಸಿಯೋಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ಗಳಲ್ಲಿಯೂ ಉತ್ತಮ ರೀತಿಯಲ್ಲಿ ವಹಿವಾಟು ನಡೆಯಿತು. ಇದೇ ವೇಳೆ ತೈಲೋತ್ಪಾದಕ ರಾಷ್ಟ್ರಗಳ ಒಕ್ಕೂಟ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿಗಾಗಿ ಕಚ್ಚಾ ತೈಲ ಉತ್ಪಾದನೆಯ ನಿರೀಕ್ಷೆ ತಗ್ಗಿಸುವ ಇಂಗಿತ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರ ಕ್ರಮ ಕೈಗೊಂಡಿಲ್ಲ: ರಾಹುಲ್‌
ವಿಶ್ವದಲ್ಲಿ ತಲ್ಲಣಕ್ಕೆ ಕಾರಣವಾಗಿರುವ ಕೊರೊನಾ ವೈರಸ್‌ ಭೀತಿ ತಡೆಯಲು ಕೇಂದ್ರ ಸರಕಾರ ಯಾವುದೇ ಮುನ್ನೆಚ್ಚರಿಕೆ ಕೈಗೊಂಡಿಲ್ಲವೆಂದು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸರಿಯಾದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೆ ಸಂಭವಿಸುವ ಆಪತ್ತು ತಡೆಯಬಹುದಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಅದು ದೇಶದ ಜನರಿಗೆ, ಅರ್ಥ ವ್ಯವಸ್ಥೆಗೆ ಮಾರಕ ಎಂದೂ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.