Egypt ;ಅಲೆಕ್ಸಾಂಡ್ರಿಯಾದಲ್ಲಿ ಗುಂಡಿನ ದಾಳಿ: ಇಬ್ಬರು ಇಸ್ರೇಲಿ ಪ್ರವಾಸಿಗರ ಮೃತ್ಯು
Team Udayavani, Oct 8, 2023, 8:49 PM IST
ಅಲೆಕ್ಸಾಂಡ್ರಿಯಾ: ಈಜಿಪ್ಟ್ನ ಅಲೆಕ್ಸಾಂಡ್ರಿಯಾ ನಗರದಲ್ಲಿ ಭಾನುವಾರ ಪೊಲೀಸ್ ಅಧಿಕಾರಿಯೊಬ್ಬ ಇಸ್ರೇಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ ನಂತರ ಕನಿಷ್ಠ ಇಬ್ಬರು ಇಸ್ರೇಲಿಗಳು ಮತ್ತು ಒಬ್ಬ ಈಜಿಪ್ಟ್ನ ಪ್ರವಾಸಿ ಗೈಡ್ ಹತ್ಯೆಗೀಡಾಗಿದ್ದಾರೆ.
ಶನಿವಾರ ಬೆಳಗ್ಗೆಯಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ನಡುವೆ ರಕ್ತಸಿಕ್ತ ಯುದ್ಧ ನಡೆಯುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಅಲೆಕ್ಸಾಂಡ್ರಿಯಾದ ಪಾಂಪೆಸ್ ಪಿಲ್ಲರ್ ಸೈಟ್ನಲ್ಲಿ ನಡೆದ ದಾಳಿಯಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಈ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಲ್ಲಿ ದಾಳಿಯ ನಂತರದ ದೃಶ್ಯಗಳು ಸೆರೆಯಾಗಿವೆ, ಕನಿಷ್ಠ ಮೂರು ಆಂಬ್ಯುಲೆನ್ಸ್ಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಧಾವಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!