ಕೊಲೆ ಮಾಡಿಸಿದ್ದೇ ಸೌದಿ ದೊರೆ?

Team Udayavani, Jun 20, 2019, 5:00 AM IST

ಜಿನೀವಾ: ಪತ್ರಕರ್ತ ಜಮಾಲ್ ಕಶೋಗ್ಗಿ ಕೊಲೆಗೂ ಸೌದಿ ಅರೇಬಿಯಾದ ರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ಗೂ ನೇರ ಸಂಬಂಧ ಇರುವ ಬಗ್ಗೆ ಸಾಕ್ಷ್ಯವಿದೆ ಎಂದು ವಿಶ್ವಸಂಸ್ಥೆಯ ತಜ್ಞರು ಹೇಳಿದ್ದಾರೆ. ಹೀಗಾಗಿ ಸಲ್ಮಾನ್‌ ವೈಯಕ್ತಿಕ ವಿದೇಶಿ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ವಿಶ್ವಸಂಸ್ಥೆಗೆ ವರದಿ ನೀಡಿದ ಆಗ್ನೆಸ್‌ ಕಲ್ಲಮರ್ಡ್‌, ಸಲ್ಮಾನ್‌ ವಿರುದ್ಧ ತನಿಖೆಗೆ ಅನುಮತಿ ಕೋರಿದ್ದಾರೆ. ವಾಷಿಂಗ್ಟನ್‌ ಪೋಸ್ಟ್‌ ಪತ್ರಿಕೆ ಪತ್ರಕರ್ತರಾಗಿದ್ದ ಜಮಾಲ್ ಕಶೋಗ್ಗಿ, ಅ. 2 ರಂದು ಇಸ್ತಾನ್‌ಬುಲ್ನ ಸೌದಿ ರಾಯಭಾರ ಕಚೇರಿಗೆ ಭೇಟಿ ನೀಡಿದ್ದಾಗ ಸಾವನ್ನಪ್ಪಿದ್ದರು. ಆರಂಭದಲ್ಲಿ ಇವರ ನಿಧನದ ಬಗ್ಗೆ ಮಾಹಿತಿಯೇ ಇಲ್ಲ ಎಂದು ಸೌದಿ ಅರೇಬಿಯಾ ಹೇಳಿತ್ತಾದರೂ, ನಂತರ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೀಡಾಗಿದ್ದರಿಂದ ರಾಯಭಾರ ಕಚೇರಿಯಲ್ಲೇ ಸಾವನ್ನಪ್ಪಿರುವುದಾಗಿ ಒಪ್ಪಿಕೊಂಡಿತು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ