ಈಶಾನ್ಯ ಉಕ್ರೇನ್: ರಕ್ಷಣಾ ವಿಮಾನ ದುರಂತದಲ್ಲಿ 22 ಜನರ ಸಾವು
Team Udayavani, Sep 26, 2020, 8:06 AM IST
ಉಕ್ರೇನ್: ಮಿಲಿಟರಿ ಸಾರಿಗೆ ವಿಮಾನ ದುರಂತದಲ್ಲಿ 22 ಜನರು ಸಾವನ್ನಪ್ಪಿದ ಘಟನೆ ಈಶಾನ್ಯ ಉಕ್ರೇನ್ ನಲ್ಲಿ ಶುಕ್ರವಾರ ಸಜೆ ನಡೆದಿದೆ.
ವಾಯು ಪಡೆಯ ಪೈಲಟ್ ಗಳು, ತರಬೇತಿ ಸೈನಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇದುವರೆಗೆ 22 ಮಂದಿ ಸಾವನ್ನಪ್ಪಿದ್ದು, ಕನಿಷ್ಠ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿದೆ.
ಉಕ್ರೇನ್ನ ತುರ್ತು ಸೇವೆ ವಿಭಾಗ ಈ ಬಗ್ಗೆ ಮಾಹಿತಿ ನೀಡಿದ್ದು, ಮಿಲಿಟರಿ ವಿಮಾನ ನಿಲ್ದಾಣದಿಂದ ಕೇವಲ ಎರಡು ಕಿ.ಮೀ ದೂರದಲ್ಲಿ ದುರಂತ ನಡೆದಿದೆ. 22 ಜನರ ದೇಹವನ್ನು ಹೊರತೆಗೆಯಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದಿದೆ.
ಇದನ್ನೂ ಓದಿ:ಡ್ರಗ್ಸ್ ಚಾಟ್ ಗ್ರೂಪ್ಗೆ ದೀಪಿಕಾ ಅಡ್ಮಿನ್!
ಈ ವಿಮಾನ ತರಬೇತಿ ವಿಮಾನವಾಗಿತ್ತು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಜೆಲೆನ್ಸ್ಕಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ