ವಿಶ್ವಸಂಸ್ಥೆ ವರ್ಚ್ಯುವಲ್ ಸಭೆ : 75ನೇ ವಾರ್ಷಿಕ ಸಾಮಾನ್ಯ ಸಭೆಗೆ ಕೋವಿಡ್ ಕಾರ್ಮೋಡ
ಮಹತ್ವವೆನಿಸುವ ಸಭೆಗೆ ಸದಸ್ಯರಿಗೆ ಹಾಜರಾತಿಯಿಂದ ವಿನಾಯಿತಿ
Team Udayavani, Jun 10, 2020, 11:59 AM IST
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ 75ನೇ ವಾರ್ಷಿಕ ಸಾಮಾನ್ಯ ಸಭೆ ಸೆಪ್ಟೆಂಬರ್ನಲ್ಲಿ ನ್ಯೂಯಾರ್ಕ್ನಲ್ಲಿ ನಡೆಯಲಿದೆ. ಆದರೆ, ವಿಶ್ವಸಂಸ್ಥೆಯ ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ವಿಶ್ವದ ನಾಯಕರು ನ್ಯೂಯಾರ್ಕ್ಗೆ ಪ್ರಯಾಣಿಸುತ್ತಿಲ್ಲ. ಅದಕ್ಕೆ ಕಾರಣ ಕೋವಿಡ್. ಆ ಹಿನ್ನೆಲೆಯಲ್ಲಿ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಗೆ ವಿಶ್ವ ನಾಯಕರು ತೆರಳುತ್ತಿಲ್ಲ.
ವಿಶ್ವಸಂಸ್ಥೆಯ ಮೈಲುಗಲ್ಲುಗಳಲ್ಲಿ ಒಂದಾಗಿರುವ ಈ 75ನೇ ವಾರ್ಷಿಕ ಸಾಮಾನ್ಯ ಸಭೆ ಸೆಪ್ಟಂಬರ್ 15ರಿಂದ ಆರಂಭವಾಗುವ ನಿರೀಕ್ಷೆ ಇದೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಸಭೆಯನ್ನು ವೀಡಿಯೋ ಕಾನ್ಫರೆನ್ಸ್ (ವರ್ಚುವಲ್) ಮೂಲಕ ನಡೆಸಲಾಗುವುದು ಎಂದು “ಎಸ್ಡಿಜಿ ನಾಲೆಡ್ಜ್ ಹಬ್’ ವೆಬ್ಸೈಟ್ ತಿಳಿಸಿದೆ.
ಈ ಮಧ್ಯೆ, ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಟಿಜ್ಜನಿ ಮೊಹಮದ್ ಬಾಂಡೆ, “ವಿಶ್ವದ ನಾಯಕರು ನ್ಯೂಯಾರ್ಕ್ಗೆ ಬರುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಏಕೆಂದರೆ, ನಾಯಕರು ಒಬ್ಬರೇ ಆಗ ಮಿಸಲು ಸಾಧ್ಯವಿಲ್ಲ. ನಾಯಕರ ಬೆಂಗಾವಲು ಪಡೆ ಸೇರಿದಂತೆ ಉನ್ನತ ಅಧಿಕಾರಿಗಳ ತಂಡ ಆಗಮಿಸಿದರೆ, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟ. ಅಲ್ಲದೆ, ಇಲ್ಲಿನ ಕೇಂದ್ರ ಕಚೇರಿಯಲ್ಲಿ ವಿಶ್ವದ ನಾಯಕರು ಮುಖಾಮುಖೀಯಾಗಿ ಚರ್ಚೆ ಅಸಾಧ್ಯ’ ಎಂದರು.
ಸಾಮಾನ್ಯ ಚರ್ಚೆಗಳ ದಿನಾಂಕ ಮುಂದೂಡುವ ಸಾಧ್ಯತೆ ಇಲ್ಲ. ಆದರೆ ಕಳೆದ 74 ವರ್ಷಗಳಲ್ಲಿ ನಡೆದಂತೆ ವಿಶ್ವದ ನಾಯಕರು ವೈಯಕ್ತಿಕವಾಗಿ ಚರ್ಚೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ