26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಬಗ್ಗೆ ಮಾಹಿತಿ ಕೊಟ್ಟರೆ 50 ಲಕ್ಷ ಬಹುಮಾನ: ಅಮೆರಿಕ
10 ಮಂದಿ ಉಗ್ರರು 2008ರ ನವೆಂಬರ್ 26ರಂದು ಮುಂಬೈನ ಹಲವು ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.
Team Udayavani, Nov 28, 2020, 1:17 PM IST
ವಾಷಿಂಗ್ಟನ್: ಹನ್ನೆರಡು ವರ್ಷಗಳ ನಂತರ ಮುಂಬೈ(26/11) ದಾಳಿಯ ಮಾಸ್ಟರ್ ಮೈಂಡ್ ಉಗ್ರ, ಲಷ್ಕರ್ ಎ ತೊಯ್ಬಾದ ಸದಸ್ಯ ಸಾಜಿದ್ ಮೀರ್ ಬಗ್ಗೆ ಮಾಹಿತಿ ನೀಡಿದರೆ 5 ಮಿಲಿಯನ್ ಡಾಲರ್ ಬಹುಮಾನ ಕೊಡುವುದಾಗಿ ಅಮೆರಿಕ ಘೋಷಿಸಿದೆ.
ಅಮೆರಿಕದ ಜಸ್ಟೀಸ್ ಪ್ರೋಗ್ರಾಂ ಈ ಬಹುಮಾನ ಘೋಷಿಸಿದ್ದು, ಸಾಜಿದ್ ಮೀರ್ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೊಯ್ಬಾದ ಹಿರಿಯ ಸದಸ್ಯ. 2008ರಲ್ಲಿ ಮುಂಬೈನಲ್ಲಿ ನಡೆದ ದಾಳಿಯಲ್ಲಿ ಶಾಮೀಲಾಗಿದ್ದು, ಈತ ಭಾರತಕ್ಕೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದಾನೆ.
ಮುಂಬೈ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿರುವ ಸಾಜಿದ್ ಮೀರ್ ಯಾವ ದೇಶದಲ್ಲಿ ಅಥವಾ ಯಾವ ಪ್ರದೇಶದಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ಮಾಹಿತಿ ನೀಡಿದಲ್ಲಿ 5 ಲಕ್ಷ ಮಿಲಿಯನ್ ಡಾಲರ್(50 ಲಕ್ಷ) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.
ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾದ ಹತ್ತು ಮಂದಿ ಉಗ್ರರು 2008ರ ನವೆಂಬರ್ 26ರಂದು ಮುಂಬೈನ ಹಲವು ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಪ್ರತಿಷ್ಠಿತ ತಾಜ್ ಹೋಟೆಲ್, ಒಬೆರಾಯ್ ಹೋಟೆಲ್, ದ ಲಿಯೋಪೋಲ್ಡ್ ಕೆಫೆ, ದ ನಾರಿಮನ್ ಹೌಸ್ ಹಾಗೂ ಚತ್ರಪತಿ ಶಿವಾಜಿ ಟರ್ಮಿನಸ್ ನಲ್ಲಿ ದಾಳಿ ನಡೆಸಿದ ಪರಿಣಾಮ ವಿದೇಶಿಯರು, ಪೊಲೀಸ್ ಅಧಿಕಾರಿಗಳು ಸೇರಿ 166 ಮಂದಿ ಸಾವನ್ನಪ್ಪಿದ್ದರು.
ಇದನ್ನೂ ಓದಿ:ವಿದೇಶದಲ್ಲಿರುವ ಕನ್ನಡಿಗರಿಂದ ಮಾತೃ ಭಾಷೆಯ ಶುದ್ಧೀಕರಣ: ಡಾ| ಡಿ. ವೀರೇಂದ್ರ ಹೆಗ್ಗಡೆ
ಭಯೋತ್ಪಾದಕ ಘಟನೆಯಲ್ಲಿ ಒಂಬತ್ತು ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಜೀವಂತವಾಗಿ ಸೆರೆಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2012ರ ನವೆಂಬರ್ 21ರಂದು ಕಸಬ್ ನನ್ನು ಪುಣೆಯ ಯರವಾಡಾ ಜೈಲಿನಲ್ಲಿ ನೇಣಿಗೇರಿಸಲಾಗಿತ್ತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444