ಬೂಸ್ಟರ್ ಡೋಸ್ ಪಡೆದುಕೊಂಡ ಅಧ್ಯಕ್ಷ ಬೈಡೆನ್
Team Udayavani, Sep 28, 2021, 10:30 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ಗೆ ಫೈಜರ್ ಲಸಿಕೆಯ ಮೂರನೇ ಡೋಸ್ ಅನ್ನು ನೀಡಲಾಗಿದೆ. ಈ ಬಗ್ಗೆ ಶ್ವೇತಭವನದ ವಕ್ತಾರರು ಖಚಿತಪಡಿಸಿದ್ದಾರೆ.
ಕಪ್ಪು ಮಾಸ್ಕ್ ಧರಿಸಿದ್ದ ಬೈಡೆನ್ ಅವರಿಗೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡುವ ಫೋಟೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. ಅಮೆರಿಕದಲ್ಲಿ ಸೋಂಕಿಗಾಗಿ ಮೂರನೇ ಡೋಸ್ ಅನ್ನು ಯಾರು ಸ್ವೀಕರಿಸಬಾರದು ಎಂಬ ಬಗ್ಗೆ ಇರುವ ಸಂಶಯ ನಿವಾರಿಸುವ ನಿಟ್ಟಿನಲ್ಲಿ ಬೈಡೆನ್ ಈ ಕ್ರಮ ಕೈಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಇತ್ತೀಚೆಗಷ್ಟೇ ಎರಡು ಸಮಿತಿಗಳು ಬೂಸ್ಟರ್ ಡೋಸ್ ಪಡೆದುಕೊಳ್ಳಲು ಶಿಫಾರಸು ಮಾಡಿದ್ದವು.
ಯಾವಾಗ ಫೋನ್ ಮಾಡ್ತಾರೆ ಹೇಳಲು ಸಾಧ್ಯವಿಲ್ಲ:
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಧ್ಯಕ್ಷ ಜೋ ಬೈಡೆನ್ ಯಾವಾಗ ಫೋನ್ ಮಾಡಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಹೀಗೆಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ. ಸೋಮವಾರ ದೈನಂದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಧ್ಯಕ್ಷರು ಪಾಕಿಸ್ತಾನ ಪ್ರಧಾನಿಗಳಿಗೆ ಯಾವಾಗ ಫೋನ್ ಮಾಡುತ್ತಾರೋ ಗೊತ್ತಿಲ್ಲ. ಅವರು ಮಾತನಾಡಿಕೊಂಡರೆ ಮಾಧ್ಯಮದವರಿಗೆ ಮಾಹಿತಿ ನೀಡುತ್ತೇವೆ’ ಎಂದರು. ಕೆಲ ದಿನಗಳ ಹಿಂದೆ ಪಾಕ್ ಪಿಎಂ ಇಮ್ರಾನ್ ಖಾನ್ ಅಮೆರಿಕ ಅಧ್ಯಕ್ಷರು ತಮ್ಮ ಜತೆಗೆ ಮಾತನಾಡಿಯೇ ಇಲ್ಲವೆಂದು ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ