ಗ್ರೀನ್‌ ಕಾರ್ಡ್‌ಗೆ ನಿರ್ಬಂಧ; 60 ದಿನಗಳವರೆಗೆ ವಿತರಣೆ ಸ್ಥಗಿತ : ಡೊನಾಲ್ಡ್‌ ಟ್ರಂಪ್‌


Team Udayavani, Apr 23, 2020, 12:01 PM IST

ಗ್ರೀನ್‌ ಕಾರ್ಡ್‌ಗೆ ನಿರ್ಬಂಧ; 60 ದಿನಗಳವರೆಗೆ ವಿತರಣೆ ಸ್ಥಗಿತ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೆರಿಕಕ್ಕೆ ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ತಮ್ಮ ಕಾರ್ಯನಿರ್ವಾಹಕ ಆದೇಶದ ಭಾಗವಾಗಿ ಮುಂದಿನ 60 ದಿನಗಳವರೆಗೆ ಹೊಸ ‘ಹಸಿರು ಕಾರ್ಡ್‌’ಗಳನ್ನು, ಅಂದರೆ, ಕಾನೂನುಬದ್ಧ ಶಾಶ್ವತ ನಿವಾಸ ಹಕ್ಕು ನೀಡುವ ಪ್ರಕ್ರಿಯೆಯನ್ನು ನಿಲ್ಲಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಫ್ ತಿಳಿಸಿದ್ದಾರೆ.

ವಿದೇಶಿಯರು ದೇಶಕ್ಕೆ ವಲಸೆ ಬರುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಆದೇಶಕ್ಕೆ ಸಹಿ ಹಾಕುವುದಾಗಿ ತಿಳಿಸಿದ ಮರುದಿನವೇ ಅಧ್ಯಕ್ಷರ ಈ ಹೊಸ ನಿರ್ಧಾರ ಹೊರಬಿದ್ದಿದೆ. ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಫ್, ‘ಕೋವಿಡ್ ಸಂಕಷ್ಟದ ಸಮಯದಲ್ಲಿ ಅಮೆರಿಕನ್‌ ಪ್ರಜೆಗಳ ಉದ್ಯೋಗ ರಕ್ಷಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಆದೇಶವು 60 ದಿನಗಳ ಕಾಲ ಜಾರಿಯಲ್ಲಿ ಇರುತ್ತದೆ. ಬಳಿಕ, ಇದನ್ನು ವಿಸ್ತರಿಸಬೇಕೇ, ಬೇಡವೆ ಎಂಬುದನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಎಚ್‌1-ಬಿ ವೀಸಾ ಇದ್ದವರ ಮೇಲೆ  ಪರಿಣಾಮವಿಲ್ಲ
ಈಗಿರುವ ಕಾನೂನಿನ ಪ್ರಕಾರ, ಅಮೆರಿಕ ಸರ್ಕಾರ ಪ್ರತಿವರ್ಷ, ಪ್ರತಿದೇಶಕ್ಕೆ ಶೇ.7ರ ಪ್ರಮಾಣದಲ್ಲಿ ಗರಿಷ್ಠ 1,40,000 ಉದ್ಯೋಗ ಆಧಾರಿತ ಹಸಿರು ಕಾರ್ಡ್‌ಗಳನ್ನು ನೀಡುತ್ತದೆ. ಭಾರತೀಯ ಐಟಿ ವೃತ್ತಿಪರರಲ್ಲಿ ಜನಪ್ರಿಯವಾಗಿರುವ ಎಚ್‌1-ಬಿ ವೀಸಾದ ರೀತಿಯಲ್ಲಿ ವಲಸೆ ರಹಿತ ವೀಸಾಗಳನ್ನು ಹೊಂದಿರುವ ವಿದೇಶಿಗರಿಗೆ ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ.

ಕೃಷಿ ಚಟುವಟಿಕೆಗಳಿಗೆ ಋತುಮಾನದ ವಲಸೆ ಕಾರ್ಮಿಕರ ಮೇಲೆ ಸಹ ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಆದರೆ, ‘ಗ್ರೀನ್‌ ಕಾರ್ಡ್‌’ಗಾಗಿ ಅರ್ಜಿ ಹಾಕಿ, ಕಾನೂನುಬದ್ಧವಾಗಿ ಶಾಶ್ವತ ನಿವಾಸದ ಹಕ್ಕಿಗಾಗಿ ಕಾಯುತ್ತಿರುವ ಸಾವಿರಾರು ಭಾರತೀಯ ಅಮೆರಿಕದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಗ್ರೀನ್‌ ಕಾರ್ಡ್‌ ಸಿಗುವುದು ಮತ್ತಷ್ಟು ವಿಳಂಬವಾಗಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.